ಅರುಣ ಸಿಂಗ್ ಸಂದೇಶ ನೋಡಿ ಸಚಿವ ಸಂಪುಟ ವಿಸ್ತರಣೆ: ಸಿಎಂ ಯಡಿಯೂರಪ್ಪ

ಬೆಳಗಾವಿ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಸಚಿವ ಸಂಪುಟದ ಸುಳಿವು ತಂದಿದ್ದಾರೆ. ಅದರ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಶುಕ್ರವಾರ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕೆ ಮಾರ್ಗದರ್ಶನ ಮಾಡಲು ಇಂದು ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸಿದ್ದಾರೆ. ರಾಜ್ಯ ಉಸ್ತುವಾರಿಯಾದ ಬಳಿಕ ಮೊದಲ‌ ಬಾರಿಗೆ ಕರ್ನಾಟಕಕ್ಕೆ ಬರುತ್ತಿದ್ದಾರೆ. ಇಂದು, ನಾಳೆ ಪಕ್ಷ ಸಂಘಟನೆ ಬಗ್ಗೆ ರಾಜ್ಯದ ಅಧ್ಯಕ್ಷರ ಸಮಕ್ಷ ಚರ್ಚೆ ಮಾಡಲಿದ್ದೇವೆ ಎಂದರು. ಇನ್ನು ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಒಂದು ಸುತ್ತು ಈಗಾಗಲೇ ಚರ್ಚೆ ನಡೆಸಲಾಗಿದೆ. ಗ್ರಾಮ ಪಂಚಾಯತಿ ಚುನಾವಣೆ ಸಂಘಟನೆ ಬಲಪಡಿಸಲು ಅನುಕೂಲವಾಗುವಂತೆ ಚರ್ಚೆ ನಡೆಸುತ್ತೇವೆ ಎಂದು ಹೇಳಿದರು‌. ಈ ಸಂದರ್ಭದಲ್ಲಿ ಡಿಸಿಎಂ ಗೋವಿಂದ ಕಾರಜೋಳ, ಸಂಸದ ಶಿವಕುಮಾರ ಉದಾಸಿ, ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ಉಮೇಶ ಕತ್ತಿ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ, ಕಾಡಾ ಅಧ್ಯಕ್ಷ ಡಾ. ವಿಶ್ವನಾಥ ಪಾಟೀಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

promotions

promotions

Read More Articles