ಗ್ರಾ. ಪಂ. ಚುನಾವಣೆಗೆ ಅಭ್ಯರ್ಥಿ ಆಗ್ತೀರಾ ? ಹಾಗಾದ್ರೆ ಯಾವ ದಾಖಲಾತಿಗಳು ಬೇಕು ಗೊತ್ತಾ ?

ಬೆಂಗಳೂರು: ಕೊರೋನಾ ಸೋಂಕಿನ ಭೀತಿಯ ನಡುವೆಯೂ ಈ ಭಾರಿ ಎರಡು ಹಂತದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ನಾಮಪತ್ರದ ಜೊತೆಗೆ ಕೆಲ ದಾಖಲೆಗಳನ್ನು ಚುನಾವನೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಸಲ್ಲಿಸುವುದು ಕಡ್ಡಾಯವಾಗಿದೆ. ಹಾಗಾದ್ರೆ ಆ ದಾಖಲೆಗಳು ಯಾವವು ?

promotions

ಮತಪತ್ರದಲ್ಲಿ ಮುದ್ರಿಸಬೇಕಾದ ಹೆಸರಿನ ಬಗ್ಗೆ ಲಿಖಿತ ಪತ್ರ

promotions

ಅಭ್ಯರ್ಥಿಗಳು ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕಾದ ಹೆಚ್ಚುವರಿ ಮಾಹಿತಿ

  1. ಪತ್ರ-5ರ ನಾಮಪತ್ರ ( ಒಬ್ಬ ವ್ಯಕ್ತಿ ನಾಲ್ಕು ನಾಮಪತ್ರಗಳನ್ನು ಸಲ್ಲಿಸಬಹುದು)
  2. ಜಾತಿ ಪ್ರಮಾಣ ಪತ್ರ
  3. ಘೋಷಣಾ ಪತ್ರ (ರೂ.20ರ ಮುಖಬೆಲೆಯ 2 ಪ್ರತಿಗಳಲ್ಲಿ)
  4. ಗ್ರಾಮ ಪಂಚಾಯಿತಿಯಿಂದ ಪಡೆದ ಬೇಬಾಕಿ ಪ್ರಮಾಣ ಪತ್ರ
  5. ಅಭ್ಯರ್ಥಿಗಳ 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
  6. ಇತ್ತೀಚಿನ ಮತದಾರರ ಗುರುತಿನ ಚೀಟಿ ಇಲ್ಲವೇ ಆಧಾರ್ ಕಾರ್ಡ್ ಝರಾಕ್ಸ್ ಪ್ರತಿ

ಠೇವಣಿ ಹಣ ಸಾಮಾನ್ಯ ಸ್ಥಾನಕ್ಕೆ ರೂ.200, ಮೀಸಲಿರಿಸಿದ ಸ್ಥಾನಗಳಿಗೆ ರೂ.100 ( ಎಸ್.ಸಿ, ಎಸ್.ಟಿ, ಬಿಸಿಎ, ಬಿಸಿಬಿ ಪ್ರವರ್ಗಗಳಿಗೆ ಮತ್ತು ಮಹಿಳೆಯರಿಗೆ)

Read More Articles