ಕುಂದಾನಗರಿ ಬೆಳಗಾವಿಗೆ ತಟ್ಟಿದ ಭಾರತ ಬಂದ್ ಬಿಸಿ

ಬೆಳಗಾವಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ವಿವಿಧ ಕೃಷಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಇಂದು ವಿವಿಧ ರೈತ ಸಂಘಟನೆಗಳು ಭಾರತ್ ಬಂದ್‌ಗೆ ಕರೆ ನೀಡಿದ್ದು, ಈ ಹಿನ್ನೆಲೆ ಬೆಳಗಾವಿ ಜಿಲ್ಲೆಯಲ್ಲಿನ ವಿವಿಧ ರೈತಪರ, ಕನ್ನಡಪರ, ಕಾರ್ಮಿಕ ಸೇರಿದಂತೆ ಇನ್ನಿತರ ಸಂಘಟನೆಗಳು ಭಾರತ ಬಂದ್ ಗೆ ಬೆಂಬಲ ಸೂಚಿಸಿದ್ದು

promotions

ಬೆಳಗಾವಿ ನಗರದಲ್ಲಿ ಈಗ ಹಲವು ರೈತ ಸಂಘಟನೆಗಳು, ರೈತ ಪರ ಸಂಟನೆಗಳಿಂದ ಬಸ್ ಸಂಚಾರ ತಡೆದು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಇಂದು ಬೆಳಗಿನ 6 ಗಂಟೆಯಿದ ಪ್ರತಿಭಟನಾಕಾರರು ಬಸ್ ನಿಲ್ದಾಣದಲ್ಲಿ ಟಿಕಾನಿ ಹೂಡಿದ್ದಾರೆ.

promotions

ಬಸ್ ನಿಲ್ದಾಣದ ಮುಂಭಾಗದಲ್ಲಿ ಟೈಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕುವುದರ ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಸ್ಥಳದಲ್ಲಿ ಬೀಗಿ ಪೊಲೀಸ್ ಭದ್ರತೆ ನಿಯೋಜನೆ ಒದಗಿಸಲಾಗಿದೆ.

Read More Articles