ಸಾರಿಗೆ ಸಚಿವರ ತವರು ಜಿಲ್ಲೆಯಲ್ಲಿ ತೀವ್ರ ಸ್ವೂರೂಪ ಪಡೆದ ಸಾರಿಗೆ ನೌಕರರ ಮುಷ್ಕರ

ಬೆಳಗಾವಿ : ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂಬ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ, ಸಾರಿಗೆ ನೌಕರರು ಬಸ್ ಸಂಚಾರ ಸ್ಥಗಿತಗೊಳಿಸಿ ರಾಜ್ಯಾದ್ಯಂತ ಮುಷ್ಕರ ಆರಂಭಿಸಿದ್ದಾರೆ.

promotions
logintomyvoice

ಈ ಹಿನ್ನಲೆ ಬೆಳಗಾವಿ ಬಸ್ ನಿಲ್ದಾಣದಲ್ಲಿ ಸಾರಿಗೆ ಸಂಸ್ಥೆಯ ನೌಕರರು ಶುಕ್ರವಾರ ಮುಂಜಾನೆಯಿಂದಲೇ ದಿಢೀರ್ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಈಗಾಗಲೇ ಕೆಎಸ್‌ಆರ್‌ಟಿಸಿ ಬಸ್ ಸೇವೆ ಮುಂಜಾನೆಯಿಂದಲೇ ಸ್ಥಗಿತಗೊಳಿಸಲಾಗಿದ್ದು ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಕೇಂದ್ರ ಬಸ್ ನಿಲ್ದಾಣದ ಪ್ರವೇಶ ದ್ವಾರದಲ್ಲೇ ಸಾರಿಗೆ ನೌಕರರು ಸಿಬ್ಬಂಧಿಯಿಂದ ಹಣ ಸಂಗ್ರಹಿಸಿ ಅಡುಗೆ ಮಾಡಿ ಊಟ ಮಾಡುವ ಮೂಲಕ ವಿವಿಧ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನೊಂದೆಡೆ ಎಂದಿನಂತೆ ಪ್ರತಿನಿತ್ಯ ತಮ್ಮ ಕಾರ್ಯಗಳಿಗೆ ಸಾಗುವ ಪ್ರಯಾಣಿಕರು ಬಸ್ ಸೇವೆ ಇಲ್ಲದೆ ಪರದಾಡುತ್ತಿದ್ದರೆ ಖಾಸಗಿ ವಾಹನ ಸವಾರರು ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುವ ಮೂಲಕ ಹೊರಹಾಕುತ್ತಿದ್ದಾರೆ.

promotions

ಇನ್ನು ಈ ಮುಷ್ಕರಕ್ಕೆ ಹಲವು ರೈತ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಕೂಡ ಸಾಥ್ ನೀಡಿದ್ದು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಅವರ ಬೇಡಿಕೆಗೆ ಸರ್ಕಾರ ಸ್ಪಂದಿಸದಿದ್ದರೆ ಹೋರಾಟ ಮುಂದುವರಿಯಲಿದೆ ಎಂದು ಹೇಳುತ್ತಿದ್ದಾರೆ ಪ್ರತಿಭಟನಾಕಾರರು. ಒಟ್ಟಿನಲ್ಲಿ ಹೇಳುವುದಾದರೆ ಸಾರಿಗೆ ನೌಕರರು ಮತ್ತು ಸರ್ಕಾರದ ನಡುವೆ ಪ್ರಯಾಣಿಕರಿಗೆ ದಿಕ್ಕು ತೋಚದಂತಾಗಿದೆ.

Read More Articles