ಜನವರಿ 1ರಿಂದ ಶಾಲಾ ಕಾಲೇಜು ಆರಂಭ; ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು: ಮಹಾಮಾರಿ ಕೊರೋನಾ ಹಾವಳಿಯಿಂದ ಕಳೆದ ಸುಮಾರು 8 ತಿಂಗಳಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿರುವ ರಾಜ್ಯ ಸರ್ಕಾರ ಜನವರಿ 1 ರಿಂದ ಶಾಲಾ, ಕಾಲೇಜು ಆರಂಭದ ಬಗ್ಗೆ ಈಗಾಗಲೇ ನಿರ್ಧಾರ ಕೈಗೊಂಡಿದ್ದು ಅದರಲ್ಲಿ ಯಾವದೇ ಬದಲಾವಣೆ ಇಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟನೆಪಡಿಸಿದ್ದಾರೆ.

promotions

ಈಗಾಗಲೇ ಹೇಳಿಕೆ ನೀಡಿರುವ ಅವರು ಮುಂದಿನ ದಿನಗಳಲ್ಲಿ ಅಗತ್ಯವಿದ್ದರೆ ಸಭೆ ನಡೆಸಿ ಪರಿಶೀಲನೆ ನಡೆಸಲಾಗುವುದು ಆದರೆ ಶಾಲಾ, ಕಾಲೇಜು ಆರಂಭದ ನಿರ್ಧಾರದಲ್ಲಿ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ.

promotions

ಶಾಲಾಕಾಲೇಜುಆರಂಭದನಿಯಮಾವಳಿಗಳುಕೆಳಗಿನಂತಿವೆ 

  1.  ಶಾಲೆ ಆರಂಭಕ್ಕೆ ಮೂರು ದಿನ ಮೊದಲು ಸಿಬ್ಬಂದಿ, ಶಿಕ್ಷಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯವಾಗಿರುತ್ತದೆ.
  2. ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
  3.  10 ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ವೇಳಾಪಟ್ಟಿ ಪ್ರಕಟಿಸಲಾಗಿದೆ. 
  4. ವಾರದಲ್ಲಿ 6 ದಿನ ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 12:30 ರವರೆಗೆ ತಲಾ 45 ನಿಮಿಷಗಳ ಮೂರು ಪಿರಿಯಡ್ ಗಳಲ್ಲಿ ಬೋಧನೆ.
  5. ವಿದ್ಯಾಗಮ ಯೋಜನೆಗೆ ಹೊಸ ವೇಳಾಪಟ್ಟಿ 
  6. ಪ್ರೌಢಶಾಲೆಗಳಲ್ಲಿ 8 , 9 ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಐದು ದಿನ ಮಧ್ಯಾಹ್ನ 2:00 ಗಂಟೆಯಿಂದ 4:30 ರವರೆಗೆ ಮೂರು ತರಗತಿಗಳು ನಡೆಯಲಿವೆ. 
  7. ಪ್ರಾಥಮಿಕ ಶಾಲೆಯಲ್ಲಿ 6 ರಿಂದ 8 ನೇ ತರಗತಿ ಮಕ್ಕಳಿಗೆ ವಾರಕ್ಕೆ 6 ದಿನ ಬೆಳಗ್ಗೆ 10 ಗಂಟೆಯಿಂದ 12.30 ರವರೆಗೆ 3 ತರಗತಿಗಳು ನಡೆಯಲಿವೆ. 
  8. ವಿದ್ಯಾರ್ಥಿಗಳು ಹೆಚ್ಚಾದಲ್ಲಿ 15 -20 ಮಕ್ಕಳ ತಂಡ ರಚಿಸಿ ವಿದ್ಯಾಗಮ ನಡೆಸಲು ಸೂಚನೆ ನೀಡಲಾಗಿದೆ.

ಹಾಗೂ ಈ ಶೈಕ್ಷಣಿಕ ವರ್ಷ ಕಡಿತಗೊಳಿಸಿರುವ ಹಿನ್ನಲೆ 10 ನೇ ತರಗತಿ ಪಠ್ಯಕ್ರಮ ಕಡಿತಗೊಳಿಸಿದ್ದು ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಜ.6 ರಂದು ಘೋಷಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

Read More Articles