ಸವದತ್ತಿ ಯಲ್ಲಮ್ಮಾ ದೇವಸ್ಥಾನಕ್ಕೆ ಡಿ. 31 ರವರೆಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ; ಡಿಸಿ ಆದೇಶ
- 15 Jan 2024 , 3:52 AM
- Belagavi
- 99
ಬೆಳಗಾವಿ: ಉತ್ತರ ಕರ್ನಾಟಕದ ಸುಪ್ರಸಿದ್ಧ ಸವದತ್ತಿ ತಾಲೂಕಿನ ಯಲ್ಲಮ್ಮನಗುಡ್ಡ ಶ್ರೀ ರೇಣುಕಾದೇವಿ ದೇವಸ್ಥಾನ ಮಹಾಮಾರಿ ಕೊರೋನಾ ಹಾವಳಿಯಿಂದಾಗಿ ಹಲವು ತಿಂಗಳುಗಳಿಂದ ಭಕ್ತಾದಿಗಳಿಂದ ವಂಚಿತವಾಗಿದ್ದು ಇದರ ಹಿನ್ನಲೆಯಲ್ಲಿ ಸಾರ್ವಜನಿಕ ಭಕ್ತಾದಿಗಳ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ -19 ಕರೋನಾ ವೈರಾಣು ಹರಡುವಿಕೆಯನ್ನು ನಿಯಂತ್ರಿಸುವ ಕುರಿತು ಮುಂಜಾಗೃತಾ ಕ್ರಮವಾಗಿ ಡಿಸೆಂಬರ್ 30 ರಂದು ಹೊಸ್ತಿಲ ಹುಣ್ಣಿಮೆ ಜಾತ್ರೆ ಇರುವುದರಿಂದ ಸಾರ್ವಜನಿಕ ಭಕ್ತಾದಿಗಳ ದರ್ಶನವನ್ನು ಡಿಸೆಂಬರ್ 31 ರವರೆಗೆ ನಿಷೇಧಿಸಿ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಆದೇಶ ಹೊರಡಿಸಿದ್ದಾರೆ. ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144ರಡಿ ಡಿಸೆಂಬರ್ 31 ರವರೆಗೆ ಪ್ರತಿ ವರ್ಷದಂತೆ ಹಮ್ಮಿಕೊಳ್ಳಲಾಗುವ ಹೊಸ್ತಿಲ ಹುಣ್ಣಿಮೆ ಜಾತ್ರಾ ಮಹೋತ್ಸವವನ್ನು ಸಾರ್ವಜನಿಕ ಭಕ್ತಾದಿಗಳ ಪಾಲ್ಗೋಳ್ಳುವಿಕೆಯನ್ನು ನಿರ್ಬಂಧಿಸಿ, ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲು ನಿರ್ಣಯಿಸಲಾಗಿದೆ. ಸಾರ್ವಜನಿಕರ ಭಕ್ತಾಧಿಗಳು ಸಹಕರಿಸಬೇಕೆಂದು ಹೇಳಿದ್ದಾರೆ.












