ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಈರಣ್ಣ ಕಡಾಡಿ ಹಾಗೂ ಅಶೋಕ ಗಸ್ತಿ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾದ ಈರಣ್ಣ ಕಡಾಡಿ ಹಾಗೂ ಆಶೋಕ್ ಗಸ್ತಿ ಇಂದು ಮಂಗಳವಾರ ನಾಮಪತ್ರ ಸಲ್ಲಿಸಿದರು. ಇಂದು ಮಂಗಳವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದರಿಂದ ವಿಧಾನಸಭಾ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಅವರಿಗೆ ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ, ಪ್ರಭಾಕರ್ ಕೋರೆ, ರಮೇಶ ಕತ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದು ಅಭ್ಯರ್ಥಿಗಳನ್ನು ಅಭಿನಂದಿಸಿದ್ದಾರೆ.

promotions

Read More Articles