ಟಾಲಿವುಡ್ ಸ್ಟಾರ್ ಮಗಧೀರ ಹೀರೋಗೆ ಕೊರೋನಾ ಪಾಸಿಟಿವ್

ಚೆನ್ನೈ :ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರ ಮಗ ರಾಮ್ ಚರಣ್​ ತೇಜ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಧೃಡಪಟ್ಟಿದೆ. ಈ ಬಗ್ಗೆ ಸ್ವತ ಅವರೇ ಟ್ವೀಟ್ ಮಾಡುವ ಮೂಲಕ ಖಚಿತಪಡಿಸಿದ್ದಾರೆ. ತನಗೆ ಕೋವಿಡ್​ ಪಾಸಿಟಿವ್ ಎಂದು ರಾಮ್​ ಚರಣ್​ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದಾರೆ. ಆದರೆ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ.

promotions

ಸದ್ಯ ಹೋಂ ಕ್ವಾರಂಟೈನ್​ ಆಗಿದ್ದೇನೆ. ಬೇಗ ಗುಣಮುಖನಾಗಿ ಹೊರ ಬರುತ್ತೇನೆ ಹಾಗೂ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರೂ ದಯವಿಟ್ಟು ಕೋವಿಡ್​ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ನೀಡುತ್ತಿರುತ್ತೇನೆ ಎಂದು ಮನವಿ ಮಾಡಿದ್ದಾರೆ. ಇನ್ನು ಅವರು ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದರು. ಈಗ ರಾಮ್​ ಚರಣ್​ ಅವರಿಗೆ ಪಾಸಿಟಿವ್​ ಬಂದ ಕಾರಣದಿಂದ ಚಿತ್ರೀಕರಣ ಮುಂದಕ್ಕೆ ಹೋಗುವ ಸಾಧ್ಯತೆ ಇದೆ.

Read More Articles