ಅಮಿತ ಶಾ ಭೇಟಿ ಹಿನ್ನಲೆ, ಜಿಲ್ಲಾ ಕ್ರೀಡಾಂಗಣ ಪರಿಶೀಲಿಸಿದ ಸಚಿವ ರಮೇಶ ಜಾರಕಿಹೊಳಿ

ಬೆಳಗಾವಿ: ಇದೇ ಜನವರಿ 17ರಂದು ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ‌ಜನಸೇವಕ ಸಮಾವೇಶ ಜರುಗಲಿದೆ ಈ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ರವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ‌ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ‌ ನೀಡಿ ಪೂರ್ವ ತಯಾರಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಸೇರಿದಂತೆ ಜಿಲ್ಲೆಯ ಬಿಜೆಪಿ‌ ನಾಯಕರು ಉಪಸ್ಥಿತರಿದ್ದರು.

promotions

promotions

Read More Articles