ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ವತಿಯಿಂದ ಯುವ ವಿಜ್ಞಾನಿ ಪ್ರಶಸ್ತಿಗಾಗಿ ನಡೆಯುವ ಸ್ಪರ್ಧೆಗೆ 9 ರಿಂದ 12ನೇ ತರಗತಿಯ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ವಿಧಾನದ ಬಗ್ಗೆ ಮನವರಿಕೆ ಮಾಡುವುದು,

promotions

ಭವಿಷ್ಯದ ವಿಜ್ಞಾನಿಗಳನ್ನು ರೂಪಿಸುವುದು ಹಾಗೂ ವಿದ್ಯಾರ್ಥಿ ದೆಸೆಯಲ್ಲಿಯೇ ರಾಜ್ಯ, ರಾಷ್ಟ್ರದ ವೈಜ್ಞಾನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವುದಕ್ಕಾಗಿ ಈ ಯೋಜನೆಯನ್ನು ಆಯೋಜಿಸಲಾಗಿದೆ ಎಂದು ತಿಳಿಸಲಾಗಿದೆ. ಜ.31ರ ಒಳಗಾಗಿ ತಮ್ಮ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿಗೆ ಹಾಗೂ ಅರ್ಜಿಯ ಒಂದು ಪ್ರತಿಯನ್ನು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಕೇಂದ್ರ ಕಚೇರಿಗೆ ಸಲ್ಲಿಸಬೇಕು. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ದೂ.9902997044, 9483549159ಕ್ಕೆ ಸಂಪರ್ಕಿಸಲು ಪ್ರಕಟನೆಯಲ್ಲಿ ತಿಳಿಸಲಾಗಿದೆ.

promotions

Read More Articles