ನಾಳೆ ನಡೆಯಬೇಕಿದ್ದ FDA ಪರೀಕ್ಷೆ ಮುಂದೂಡಿಕೆ
- 30 Dec 2023 , 4:34 AM
- Bengaluru
- 127
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಅನ್ವಯ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಾಳೆ ಭಾನುವಾರ ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದೆ ಎಂದು ತಿಳಿದು ಬಂದಿರುವ ಹಿನ್ನೆಲೆಯಲ್ಲಿ ಜನವರಿ 24 ರಂದು ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯಕರ (FDA) ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ.

ದಿನಾಂಕವನ್ನುಮರುನಿಗದಿಪಡಿಸಿಪ್ರಕಟಿಸಲಾಗುವುದುಎಂದುಕರ್ನಾಟಕಲೋಕಸೇವಾಆಯೋಗದಕಾರ್ಯದರ್ಶಿತಿಳಿಸಿದ್ದಾರೆ.










