MES, ಶಿವಸೇನೆ ನಿಷೇಧಕ್ಕೆ ಆಗ್ರಹ
- 14 Jan 2024 , 11:27 PM
- Belagavi
- 114
ಬೆಳಗಾವಿ: ಮಹಾರಾಷ್ಟ್ರ ಸಿಎಂ ಉದ್ದವ ಠಾಕ್ರೆ ಬೆಳಗಾವಿ ಕರ್ನಾಟಕದ ಅಕ್ರಮಿತ ಪ್ರದೇಶವೆಂದು ಹೇಳಿಕೆ ನೀಡಿರುವುದನ್ನು ಖಂಡಿಸಿ ಗುರುವಾರ ಕರುನಾಡ ಸೇವಕರು ಕನ್ನಡ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ರವಾನಿಸಿದರು.

MES, ಶಿವಸೇನೆ ನಿಷೇಧಕ್ಕೆ ಆಗ್ರಹ pic.twitter.com/uQCYh4JAIb

ಮಹಾರಾಷ್ಟ್ರದಲ್ಲಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಬೆಳಗಾವಿಯನ್ನು ಮಹಾರಾಷ್ಟ್ರದ ಅಕ್ರಮಿತ ಪ್ರದೇಶ ಹಾಗೂ ಅದನ್ನು ಪಡೆದೆ ತೀರುವೆವು ಎಂದು ಹೇಳಿಕೆ ನೀಡುವ ಮೂಲಕ ಬೆಳಗಾವಿ ಹಾಗೂ ರಾಜ್ಯದ ಮರಾಠಿ ಭಾಷಿಕರನ್ನು ಪ್ರಚೋದಿಸಿ ಕರ್ನಾಟಕ ರಾಜ್ಯದ ಕನ್ನಡಿಗರನ್ನು ಕೆರಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇವರ ಮೇಲೆ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಆಗ್ರಹಿಸಿದ್ದಾರೆ.
ಮಹಾರಾಷ್ಟ್ರದ ಶಿವಸೇನೆ ಹಾಗೂ ಎಂಇಎಸ್ ಸಂಘಟನೆಗಳು ಪ್ರತಿಬಾರಿ ಬೆಳಗಾವಿಯಲ್ಲಿರುವ ಮರಾಠಿಗರನ್ನು ಮುಂದಿಟ್ಟುಕೊಂಡು ರಾಜಕೀಯ ನಡೆಸುತ್ತಿರುವ ಈ ಸಂಘಟನೆಗಳನ್ನು ರಾಜ್ಯದಲ್ಲಿ ನಿಷೇ್ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ವಿನಾಯಕ ಬ್ಯಾಳೇರಿ, ಶುಭಂ ಗಡಾದ, ಅನಿಲ್ ದಡ್ಡಿಮನಿ, ಸದಾನಂದ ಕೋಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.










