ಪೆ.28 ವರೆಗೆ ವಿದ್ಯಾರ್ಥಿಗಳು ಉಚಿತವಾಗಿ ಬಸ್ಸಿನಲ್ಲಿ ಪ್ರಯಾಣಿಸಲು ಅನುಮತಿ

ಬೆಂಗಳೂರು: ವಿದ್ಯಾರ್ಥಿ ಬಸ್ ಪಾಸ್ ಮಾನ್ಯತೆ ಪದವಿ ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳಿಗೆ 2020-21ನೇ ಶೈಕ್ಷಣಿಕ ವರ್ಷದ ಚಟುವಟಿಕೆಗಳನ್ನು ಪ್ರಾರಂಭಿಸಲಾದ ಕಾರಣ 2019-20ನೇ ಸಾಲಿನಲ್ಲಿ ವಿತರಣೆಯಾಗಿರುವ ವಿದ್ಯಾರ್ಥಿಗಳ ಬಸ್ ಪಾಸುಗಳನ್ನು ದಿನಾಂಕ: 31.01.2021 ನಿಗಮದ ಬಸ್ಸುಗಳಲ್ಲಿ ಮಾನ್ಯ ಮಾಡಲು ಕ್ರಮಕೈಗೊಳ್ಳಲಾಗಿತ್ತು.

promotions

ಇದೀಗ, ಪಾಸುಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಸಾಕಷ್ಟು ಕಾಲಾವಕಾಶ ನೀಡುವ ಸಲುವಾಗಿ ಎಲ್ಲಾ ವರ್ಗದ ಶಾಲಾ / ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ (2019-20) ಬಸ್ ಪಾಸ್‌ನೊಂದಿಗೆ ಪ್ರಸ್ತುತ ಸಾಲಿನಲ್ಲಿ ಶಾಲಾ | ಕಾಲೇಜುಗಳಿಗೆ ಪಾವತಿಸಿರುವ ರಸೀದಿ ಜೊತೆಗೆ ನಿಗಮದ ಬಸ್ಸುಗಳಲ್ಲಿ ಸಂಬಂಧಪಟ್ಟ ಮಾರ್ಗದಲ್ಲಿ ಅಥವಾ ಹೊಸ ವಿಳಾಸದಲ್ಲಿರುವ ಶಾಲಾ / ಕಾಲೇಜುಗಳಿಗೆ ತೆರಳಲು ದಿನಾಂಕ: 28.02.2021 ರವರೆಗೆ ಉಚಿತವಾಗಿ ಪ್ರಯಾಣಿಸಲು ಅನುಮತಿಸಲು ಕ್ರಮ ಕೈಗೊಳ್ಳಲಾಗಿದೆ.

promotions
logintomyvoice

ಅದರನ್ವಯ ವಿದ್ಯಾರ್ಥಿಗಳು ಪ್ರಸಕ್ತ ವರ್ಷದಲ್ಲಿ ಶಾಲಾ | ಕಾಲೇಜುಗಳಿಗೆ ದಾಖಲಾಗಿರುವ ಸಂಬಂಧದ ಪ್ರಸಕ್ತ ವರ್ಷದ ಶುಲ್ಕ ಪಾವತಿ ರಶೀದಿಯೊಂದಿಗೆ, 2019-20ನೇ ಸಾಲಿನ ವಿದ್ಯಾರ್ಥಿ ಬಸ್‌ಪಾಸ್ ತೋರಿಸಿ ಸಂಬಂಧಪಟ್ಟ ಮಾರ್ಗದಲ್ಲಿ ಕರಾರಸಾ ನಿಗಮದ ನಗರ, ಹೊರವಲಯ

ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ಶಾಲಾ / ಕಾಲೇಜು ವಿದ್ಯಾರ್ಥಿಗಳು ಸೇವಾಸಿಂಧು ಮೂಲಕ ಪ್ರಸಕ್ತ ವರ್ಷದ ದಾಖಲಾತಿಗಳನ್ನು ಸಲ್ಲಿಸಿ, ನೂತನ ಪಾಸು ಪಡೆಯಲು ಸೂಕ್ತ ಪ್ರಕಟಣೆ ನೀಡಲು ತಿಳಿಸಲಾಗಿದೆ.

Read More Articles