ಬಿಜೆಪಿ ಪಾಲಾದ ವಿಪ ಉಪಸಭಾಪತಿ ಸ್ಥಾನ

ಬೆಂಗಳೂರು: ವಿಧಾನ ಪರಿಷತ್ ಉಪಸಭಾಪತಿಯಾಗಿ ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಅವರನ್ನು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಪರ 41 ಮತಗಳನ್ನು ಚಲಾವಣೆಯಾಗಿದ್ದರೆ, ವಿರುದ್ಧವಾಗಿ 24 ಮತಗಳು ಚಲಾವಣೆಯಾಗಿವೆ.

promotions

ಈ ಮೂಲಕ ಗೆಲುವು ಸಾಧಿಸಿರುವ ಎಂ.ಕೆ.ಪ್ರಾಣೇಶ್ ಅವರು ವಿಧಾನ ಪರಿಷತ್ ನ ಉಪಸಭಾಪತಿಯಾಗಿ ಆಯ್ಕೆಯಾಗಿದ್ದಾರೆ. ವಿಧಾನಪರಿಷತ್ ಉಪಸಭಾಪತಿಯಾಗಿ ಆಯ್ಕೆಯಾದ ಎಂ.ಕೆ. ಪ್ರಾಣೇಶ್ ಗೆ ಸಿಎಂ ಬಿ.ಎಸ್.ಯಡಿಯೂರಪ್ಪ, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸೇರಿದಂತೆ ಆಡಳಿತ ಪಕ್ಷದ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

promotions

Read More Articles