ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ಯಮಕನಮರಡಿ: ಸಮೀಪದ ಮಾವನೂರ ಗ್ರಾಮ ಪಂಚಾಯ್ತಿಗೆ ಶನಿವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶೋಭಾ ಗುಡಗನಟ್ಟಿ ಹಾಗೂ ಉಪಾಧ್ಯಕ್ಷರಾಗಿ ವಿಜಯಲಕ್ಷ್ಮಿ ತೋಶಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಶೋಭಾ, ಶಾಸಕ ಸತೀಶ ಜಾರಕಿಹೊಳಿ ಅವರ ಆದೇಶದ ಮೇರೆಗೆ ಅವಿರೋಧ ಆಯ್ಕೆ ಮಾಡಲಾಗಿದೆ.

promotions

ಕ್ಷೇತ್ರದಲ್ಲಿ ಶಾಸಕರು ಮಾಡಿರುವಂತ ಅಭಿವೃದ್ಧಿ ಕಾರ್ಯಗಳು ಹಾಗೂ ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತಗಳನ್ನು ಬೆಂಬಲಿಸಿ ಜನರು ನಮ್ಮನ್ನು ಅಭೂತಪೂರ್ವವಾಗಿ ಗೆಲ್ಲಿಸಿದ್ದಾರೆ. ನಾವೆಲ್ಲರೂ ಒಗ್ಗಟ್ಟಿಬ ಉತ್ತಮ ಕಾರ್ಯಗಳ ಮೂಲಕ ಗ್ರಾಮದ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ಹೇಳಿದರು.

promotions

ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರನ್ನು ಗ್ರಾಮದ ಮುಖಂಡರು ಸನ್ಮಾನಿಸಿದರು. ಮುಖಂಡರಾದ ಶಿವಪ್ಪ ಈರನಟ್ಟಿ, ಅಡಿವೆಪ್ಪ ನಾಯ್ಕ್, ಪಾಂಡು ಮಣ್ನಿಕೇರಿ, ವಿನೋದ ಡೊಂಗ್ರೆ, ,ಮಾರುತಿ ಗುಟಗುದ್ದಿ, ಚಂದ್ರು ಹೆಬ್ಬಾಳ, ಯಲ್ಲಪ್ಪ ನಾಯ್ಕ್, ಸಿದ್ದಪ್ಪ ಶಿರೂರ ಇದ್ದರು. ನೀರಾವರಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಜಮಖಂಡಿ ಅವರು ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

Read More Articles