ಪರಿಷತ್ತ್ ಗೆ ಅವಿರೋಧವಾಗಿ ಆಯ್ಕೆಯಾದ ಹೊರಟ್ಟಿ
- 2 Jan 2024 , 1:37 AM
- Bengaluru
- 120
ಬೆಂಗಳೂರು : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಸವರಾಜ್ ಹೊರಟ್ಟಿಯವರು ಅವಿರೋಧ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು.

ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಬಸವರಾಜ್ ಹೊರಟ್ಟಿ ಕಣಕ್ಕೆ ಇಳಿದಿದ್ದರು. ಕಾಂಗ್ರೆಸ್ ನಿಂದ ನಜೀರ್ ಅಹ್ಮದ್ ಅಭ್ಯರ್ಥಿಯಾಗಿದ್ದರು. ಕೊನೆಯ ಹಂತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಜೀರ್ ಕಣದಿಂದ ಹಿಂದೆ ಸರಿದಿದ್ದರು. ಇದರಿಂದಾಗಿ ವಿಧಾನ ಪರಿಷತ್ ಸಭಾವತಿಯಾಗಿ ಬಸವರಾಜ್ ಹೊರಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.











