ಕಾಕತಿ ಪಂಚಾಯಿತಿಯಲ್ಲಿ ಸಾರ್ವಜನಿಕರ ಕಂದು ಕೊರತೆ ಆಲಿಸಿದ ಶಾಸಕ ಸತೀಶ ಜಾರಕಿಹೊಳಿ
- 15 Jan 2024 , 2:38 AM
- Belagavi
- 124
ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು, ಕಾಕತಿ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ಸಾರ್ವಜನಿಕರ ಕುಂದು ಕೊರತೆ ಆಲಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರು, ಒಳ ಚರಂಡಿ ಹಾಗೂ ರಸ್ತೆ ಸಮಸ್ಯೆಗಳ ಕುರಿತು ಸಾರ್ವಜನಿಕರು ಶಾಸಕರ ಗಮನಕ್ಕೆ ತಂದರು.

ಇವರ ಸಮಸ್ಯೆಗೆ ಸ್ಪಂದಿಸಿದ ಶಾಸಕರು ಶೀಘ್ರದಲ್ಲೇ ನೆರವೇರಿಸುವ ಬಗ್ಗೆ ಬರವಸೆ ನೀಡಿದರು, ಉದೋಗ ಖಾತರಿ ಯೋಜನೆ ಸದುಪಯೋಗ ಪಡೆಸಿಕೊಂಡು ಗ್ರಾಮ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಚುನಾಯಿತ ಅದ್ಯಕ್ಷರು ಹಾಗೂ ಸದಸ್ಯರು ಗ್ರಾಮದ ಮುಖಂಡರು ಪಿಡಿಒ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.










