ಸುರೇಶ ಅಂಗಡಿ ತಾಯಿ ಸೋಮವ್ವ ನಿಧನ
- 22 Dec 2023 , 3:28 AM
- Belagavi
- 130
ಬೆಳಗಾವಿ :ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ. ಸುರೇಶ ಅಂಗಡಿ ಅವರ ತಾಯಿ ಸೋಮವ್ವ ಅಂಗಡಿ ಗುರುವಾರ ಬೆಳಗ್ಗೆ 9.20ಕ್ಕೆ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.

ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದ ನಾಗೇರಹಾಳ ಗ್ರಾಮದವರಾದ ಸೋಮವ್ವ ಕಳೆದ ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಐವರು ಗಂಡು ಮಕ್ಕಳು ಹಾಗೂ ಓರ್ವ ಹೆಣ್ಣು ಮಗಳು. ಸುರೇಶ ಅಂಗಡಿ ಅವರ ಮೇಲೆ ಅತ್ಯಂತ ಪ್ರೀತಿ ಹೊಂದಿದ್ದ ಸೋಮವ್ವ, ಸುರೇಶ ಅಂಗಡಿ ಅಕಾಲಿಕ ನಿಧನದಿಂದ ಮಾನಸಿಕವಾಗಿ ಕುಗ್ಗಿಹೋಗಿದ್ದರು. ಇಂದು ಸಂಜೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಮೃತರ ಅಂತ್ಯ ಸಂಸ್ಕಾರ ನಡೆಯಲಿದೆ.











