ಎಫ್‌ಐಆರ್ ದಾಖಲಾದರೆ ಮಾತ್ರ ಅಪರಾಧಿಗಳಿಗೆ ಶಿಕ್ಷೆ ಸಾಧ್ಯ: ಶಾಸಕ ಸತೀಶ

ಬೆಳಗಾವಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಮಾಡಿಸಲು ಸರಕಾರ ಎಸ್‌ಐಟಿ ರಚನೆ ಮಾಡಿರುವುದು ಸ್ವಾಗತಾರ್ಹ. ಆದರೆ, ಯಾವುದೇ ಪ್ರಕರಣದಲ್ಲಿ ಎಸ್‌ಐಟಿ ವರದಿಯನ್ನು ಮಾತ್ರ ನೀಡುತ್ತದೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದರೆ ಮಾತ್ರ ಅಪರಾಧಿಗಳಿಗೆ ಶಿಕ್ಷೆ ನೀಡಲು ಸಾಧ್ಯ" ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

promotions

ಶುಕ್ರವಾರ ನಗರದ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್‌ಐಟಿ ರಚನೆ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸೇರಿದಂತೆ ಕೆಲವು ಮುಖಂಡರು ವ್ಯಕ್ತಪಡಿಸಿರುವ ಅಭಿಪ್ರಾಯ ಸರಿ ಇದೆ" ಎಂದರು.

promotions

"ಸಿಡಿ ಪ್ರಕರಣದಿಂದ ಜಾರಕಿಹೊಳಿ ಕುಟುಂಬದ ಗೌರವಕ್ಕೆ ಸ್ಪಲ್ಪ ಮಟ್ಟಿಗೆ ಧಕ್ಕೆಯಾಗಿರಬಹುದು. ಆದರೆ, ನಮ್ಮೊಡನೆ ಅಪಾರ ಬೆಂಬಲಿಗರು ಇದ್ದಾರೆ. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಲಿ. ಸತ್ಯಾಸತ್ಯತೆ ಹೊರಬರಲಿ" ಆಗ ಎಲ್ಲವೂ ಸ್ಪಷ್ಟವಾಗಲಿದೆ" ಎಂದರು. ನಾನು ನಿಡಗುಂದಿಗೆ ಯುವತಿಗಾಗಿ ಭೇಟಿ ನೀಡಿದ್ದೆ ಎಂಬುದು ಕೇವಲ ಊಹಾಪೋಹ ಎಂದು ಪತ್ರಕರ್ತರ ಪ್ರಶ್ನೆಗೆ ಅವರು ಸ್ಪಷ್ಟನೆ ನೀಡಿದರು.

ಚುನಾವಣೆಗೆ ಸಮಯವಿದೆ

:

"ಉಪಚುನಾವಣೆ ವಿಳಂಬಕ್ಕೆ ಕೆಲವು ಮುಖಂಡರು ಆಕ್ಷೇಪ ವ್ಯಕ್ತಪಡಿಸುತ್ತಿರುವುದು ಸರಿ ಇದೆ. ಆದರೆ, ಏಪ್ರಿಲ್ ಕೊನೆಯ ವಾರದವರೆಗೆ ಚುನಾವಣಾ ನಡೆಸಲು ಅವಕಾಶವಿದೆ. ಹೀಗಾಗಿ, ಕಾದು ನೋಡೋಣ. ಬೆಳಗಾವಿ ಲೋಕಸಭಾ ಉಪಚುನಾವಣೆಗೆ ದಿನಾಂಕ ಪ್ರಕಟವಾದ ನಂತರವೇ ಅಭ್ಯರ್ಥಿಯನ್ನು ಘೋಷಿಸಲಾಗುವುದು" ಎಂದು ತಿಳಿಸಿದರು.

ಮಾಜಿ ಶಾಸಕ ಮಧು ಬಂಗಾರಪ್ಪ ಸೇರಿ ಅನೇಕರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದಾರೆ. ಜಿಲ್ಲೆಯಲ್ಲೂ ಮುಂದಿನ ದಿನಗಳಲ್ಲಿ ಅನೇಕ ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ. ಪಕ್ಷಕ್ಕೆ ಬರುವವರನ್ನು ಸೇರಿಸಿಕೊಳ್ಳಲು ಎಲ್ಲ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆಯಲಾಗಿದೆ" ಎಂದರು.

"ಯುವ ಕಾಂಗ್ರೆಸ್ ನಲ್ಲಿ ತಾಂತ್ರಿಕ ಸಮಸ್ಯೆಯಿಂದ ಗೊಂದಲ ಆಗಿದೆ. ಈ ಬಗ್ಗೆ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಂಡು ಸಮಸ್ಯೆ ಬಗೆಹರಿಸಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿ ಗ್ರಾಮೀಣ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿ ಇದ್ದರು.

Read More Articles