ನೈಟ್ ಕರ್ಫೂ ಬಗ್ಗೆ ಚರ್ಚೆ ಆಗಿಲ್ಲ: ಬಸವರಾಜ ಬೊಮ್ಮಾಯಿ
- 14 Jan 2024 , 10:41 PM
- Bengaluru
- 133
ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾತ್ರಿ ಕರ್ಫೂ ಜಾರಿ ಬಗ್ಗೆ ಇದುವರೆಗೆ ಯಾವುದೇ ರೀತಿಯ ಚರ್ಚೆ ಆಗಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.

ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ನಿಯಂತ್ರಣ ಕ್ರಮಗಳು ಜಾರಿಯಲ್ಲಿವೆ ಎಂದರು. ಸಿಡಿ ಪ್ರಕರಣದ ಯುವತಿ ರಕ್ಷಣೆ ಕೋರಿದ್ದು ತಮ್ಮ ಗಮನಕ್ಕೆ ಬಂದಿದೆ. ಅದನ್ನು SIT ನೋಡಿಕೊಳ್ಳುತ್ತದೆ.

ರಕ್ಷಣೆ ಕೋರಿದ ಕುಟುಂಬಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದರು. ಸಿಎಂ ಬಿ ಎಸ್ ಯಡಿಯೂರಪ್ಪ ನಾಳೆ ಮುಂಜಾನೆ ಎಲ್ಲ ಸಚಿವರ ಸಭೆ ಕರೆದಿದ್ದಾರೆ. ಅಲ್ಲಿ ಯಾವ ವಿಷಯ ಚರ್ಚೆ ಆಗುತ್ತೋ ನೋಡೋಣ ಎಂದು ಅವರು ತಿಳಿಸಿದರು.










