ಸದನದಲ್ಲಿ ಡಾ.ಸುಧಾಕರ್ ಹೇಳಿಕೆ ಪ್ರಸ್ತಾಪಕ್ಕೆ ಬಸವರಾಜ ಬೊಮ್ಮಾಯಿ ಆಕ್ಷೇಪ

ಬೆಂಗಳೂರು: ಆರೋಗ್ಯ ಸಚಿವ ಡಾ ಸುಧಾಕರ್ ಅವರು ಸದನದ ಹೊರಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಅವರು ನೀಡಿರುವ ಹೇಳಿಕೆ ಬಗ್ಗೆ ನಿಮಗೆ ಆಕ್ಷೇಪ‌ ಇದ್ದರೆ ಸದನದ ಹೊರಗೆ ಆ ಬಗ್ಗೆ ಪ್ರಶ್ನಿಸಿ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು.

promotions

ಬುಧವಾರ ವಿಧಾನಸಭೆಯಲ್ಲಿ ಭೋಜನ ವಿರಾಮದ ಬಳಿಕ ಧರಣಿ ಸತ್ಯಾಗ್ರಹದಲ್ಲಿ ನಿರತರಾಗಿದ್ದ ಕಾಂಗ್ರೆಸ್ ಸದಸ್ಯರು ಡಾ. ಸುಧಾಕರ್ ಹೇಳಿಕೆಯನ್ನು ಪ್ರಸ್ತಾಪಿಸಿದರು. ಇದಕ್ಕೆ ಉತ್ತರಿಸಿದ ಸಚಿವ ಬೊಮ್ಮಾಯಿ, ಸುಧಾಕರ್ ಅವರು ಸದನದ ಹೊರಗೆ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸದನದ ಹೊರಗೆ ಪ್ರಸ್ತಾಪ ಮಾಡಿ. ಸುಧಾಕರ್ ಆ ಹೇಳಿಕೆಯನ್ನು ಯಾವ ಸಂದರ್ಭಕ್ಕೆ ಉದಾಹರಿಸಿ ಹೇಳಿದ್ದಾರೆ ಎಂಬುದು ಗೊತ್ತಿಲ್ಲ. ಆದ್ದರಿಂದ ಆ ಬಗ್ಗೆ ಸದನದಲ್ಲಿ ಚರ್ಚೆ ಮಾಡಬೇಕಾದ ಅಗತ್ಯ ಇಲ್ಲ. ಯಾರೂ ಗಾಬರಿಯಾಗಬೇಕಾಗಿಲ್ಲ ಎಂದು ಹೇಳಿದರು.

promotions

Read More Articles