ನಾಮಪತ್ರ ಸ್ವೀಕಾರ, ಪರಿಶೀಲನೆ ಪ್ರಕ್ರಿಯೆ- ಸಾರ್ವಜನಿಕ ಭೇಟಿಗೆ ಮಧ್ಯಾಹ್ನ ಅವಕಾಶ: ಜಿಲ್ಲಾಧಿಕಾರಿ

ಬೆಳಗಾವಿ :ಲೋಕಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸ್ವೀಕಾರ ಮತ್ತು ಪರಿಶೀಲನೆ ಪ್ರಕ್ರಿಯೆ ನಡೆಯುತ್ತಿರುವುದರಿಂದ ಸಾರ್ವಜನಿಕರು ಮಾ.30 ಹಾಗೂ ಮಾ.31 ರಂದು ಮಧ್ಯಾಹ್ನ 3 ಗಂಟೆಯ ಬಳಿಕವೇ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಬಹುದು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.

promotions

ನಾಮಪತ್ರ ಸ್ವೀಕಾರ ಮತ್ತು ಪರಿಶೀಲನೆಯ ಪ್ರಕ್ರಿಯೆಯಲ್ಲಿ ತೊಡಗಿರುವುದರಿಂದ ಸಾರ್ವಜನಿಕರು ತಮ್ಮ ದೈನಂದಿನ ಕೆಲಸ-ಕಾರ್ಯಗಳಿಗಾಗಿ ಮಧ್ಯಾಹ್ನ 3 ಗಂಟೆಯ‌ ಬಳಿಕ ಭೇಟಿ ಮಾಡಬಹುದು.

promotions

ಜಿಲ್ಲಾಧಿಕಾರಿ ಕಚೇರಿಯ ಸುತ್ತ ಪೊಲೀಸ್ ಬಂದೋಬಸ್ತ್ ಇರುವುದರಿಂದ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

Read More Articles