ಮಾಜಿ ಪ್ರಧಾನಿ ದಂಪತಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಅವರ ಧರ್ಮಪತ್ನಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಸ್ವತಃ ಅವರೇ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಟ್ವೀಟ್​ನಲ್ಲಿ ನಾನು ಮತ್ತು ನನ್ನ ಪತ್ನಿಗೆ ಕೋವಿಡ್ 19 ಸೋಂಕು ಪಾಸಿಟಿವ್ ಆಗಿದೆ.

promotions

ನಮ್ಮ ಕುಟುಂಬದ ಸದಸ್ಯರೊಂದಿಗೆ ನಾವು ಐಸೋಲೇಟ್​ಗೆ ಒಳಗಾಗುತ್ತಿದ್ದೇವೆ. ಕೆಲದಿನಗಳಿಂದ ನಮ್ಮ ಜೊತೆ ಸಂಪರ್ಕದಲ್ಲಿದ್ದವರು ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ. ಪಕ್ಷದ ಕಾರ್ಯಕರ್ತರಲ್ಲಿ ಆತಂಕಗೊಳ್ಳದಂತೆ ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ. ಈ ಕುರಿತು ಆರೋಗ್ಯ ಸಚಿವ ಡಾ. ಕೆ ಸುಧಾಕರ ಕೂಡ ಟ್ವೀಟ್ ಮಾಡಿದ್ದಾರೆ.

Read More Articles