ಲಡಾಕ್ : ಭಾರತ ಚೀನಾ ಸೈನಿಕರ ನಡುವೆ ಸಂಘರ್ಷ ಬಹಳ ಉದ್ವಿಗ್ನ ಪರಿಸ್ಥಿತಿಯನ್ನು ಸೃಷ್ಟಿ ಮಾಡಿದೆ. ನಿನ್ನೆ ಸೋಮವಾರ ರಾತ್ರಿಯ ಸಂಘರ್ಷ ಆರಂಭ ವಾಗಿತ್ತು ಸಂಘರ್ಷದಲ್ಲಿ ಕರ್ನಲ್ ಹಾಗೂ ಇಬ್ಬರೂ ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದರು ಇವತ್ತು ಭಾರತ ಚೀನಾ ನಡುವೆ ತೀವ್ರ ಕಾಳಗ ಏರ್ಪಟ್ಟಿದೆ . ಲಡಾಖ್‌ನ ಪೂರ್ವಭಾಗದ ಗಲ್ವಾನ್ ಕಣಿವೆಯಲ್ಲಿ ಚೀನಾದ ಸೇನಾಪಡೆಗಳೊಂದಿಗೆ ನಡೆದ ಸಂಘರ್ಷದಲ್ಲಿ ಭಾರತೀಯ ಸೇನೆಯ ಕನಿಷ್ಠ 20 ಯೋಧರು ಹುತಾತ್ಮರಾಗಿದ್ದಾರೆ. ಈ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ಸಂಘರ್ಷದಲ್ಲಿ ಚೀನಾದ 43 ಸೈನಿಕರು ಸಾವು–ನೋವು ಸಂಭವಿಸಿದೆ. ವಿದೇಶಾಂಗ ಸಚಿವ ಎಸ್.ಜೈಶಂಕರ್, ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಸೇನೆಯ ಮೂರೂ ಪಡೆಗಳ ಮುಖ್ಯಸ್ಥರ ಜತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆ ನಡೆಸಿದ್ದು, ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪರಿಸ್ಥಿತಿಯ ಬಗ್ಗೆ ವಿವರಣೆ ನೀಡಿದ್ದಾರೆ. ಭಾರತ ಚೀನಾ ವಾರ ಅಂತು ಶುರುವಾದಂತಾಗಿದೆ.