ಸಿದ್ದು-ಡಿಕೆಶಿಗೆ ಟಾಂಗ್ ಕೊಟ್ಟ ಬಿ.ಬಸವರಾಜ
- 15 Jan 2024 , 12:28 AM
- Belagavi
- 82
ಬೆಳಗಾವಿ: ಚುನಾವಣಾ ಪ್ರಚಾರಕ್ಕೆ ಬೆಳಗಾವಿಗೆ ಆಗಮಿಸಿದ ಸಚಿವ ಭೈರತಿ ಬಸವರಾಜ ಸಿದ್ದರಾಮಯ್ಯ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿಚಾರವಾಗಿ ಹೇಳಿಕೆ ನೀಡಿದ ಭೈರತಿ ಸಿದ್ದರಾಮಯ್ಯ ತಮ್ಮ ಪಕ್ಷದಲ್ಲಿ ಏನಾಗಿದೆ ಅದನ್ನು ನೋಡಿಕೊಳ್ಳಲಿ.

ಕೋವಿಡ್ ಸಂದರ್ಭದಲ್ಲಿ ಸಿಎಂ ಬಿಎಸ್‌ವೈ ಅನೇಕ ಜನಪರ ಯೋಜನೆ ಕೊಟ್ಟಿದ್ದಾರೆ. ಇನ್ನೆರಡು ದಿನ ಬೆಳಗಾವಿಯಲ್ಲಿ ಇದ್ದು ಪ್ರಚಾರ ಮಾಡಿ ಮಸ್ಕಿ, ಬಸವಕಲ್ಯಾಣ ಹೋಗ್ತೇನೆ. ಸಿಎಂ ರಾಜೀನಾಮೆ ನೀಡಲಿ ಇಲ್ಲ ಈಶ್ವರಪ್ಪ ವಜಾ ಮಾಡಲಿ ಎಂಬ ಡಿಕೆಶಿಗೆ ಆಗ್ರಹ ವಿಚಾರಕ್ಕೆ ರಿಯಾಕ್ಷನ್ ನೀಡಿದ ಅವರು ಇದು ನಮ್ಮ ಆಂತರಿಕ ವಿಷಯ ಇದಕ್ಕೂ ಅವರಿಗೆ ಸಂಬಂಧ ಇಲ್ಲ ನಾಳೆ ಬೆಳಗ್ಗೆಯೇ ಸಿಎಂ ಆಗುವ ಕನಸಿನಲ್ಲಿ ಅವರಿದ್ದಾರೆ ಎಂದು ಸಚಿವ ಭೈರತಿ ಬಸವರಾಜ ಟಾಂಗ್ ನೀಡಿದ್ದಾರೆ.











