ಸುಳೇಬಾವಿಯಲ್ಲಿ ಶನಿವಾರ ಬೃಹತ್ ಸಮಾವೇಶ

ಬೆಳಗಾವಿ :ಏಪ್ರಿಲ್ 17ರಂದು ನಡೆಯಲಿರುವ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸತೀಶ್ ಜಾರಕಿಹೊಳಿ ಪರವಾಗಿ ಪ್ರಚಾರ ಮಾಡಲು ಕಾಂಗ್ರೆಸ್ ಪಕ್ಷದ ಹಲವಾರು ದಿಗ್ಗಜರು ಆಗಮಿಸುತ್ತಿದ್ದು, ಶನಿವಾರ ಸಂಜೆ ಬೃಹತ್ ಸಮಾವೇಶ ನಡೆಯಲಿದೆ.

promotions

ಸಂಜೆ 5 ಗಂಟೆಗೆ ಸುಳೇಬಾವಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಮುಖಂಡರುಗಳಾದ ರಾಮಲಿಂಗಾ ರಡ್ಡಿ, ಆರ್.ವಿ.ದೇಶಪಾಂಡೆ, ಕೆ.ಎಚ್.ಮುನಿಯಪ್ಪ ಮೊದಲಾದವರು ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಲಿದ್ದಾರೆ.

promotions

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಮಾವೇಶದಲ್ಲಿ ಭಾಗವಹಿಸಬೇಕೆಂದು ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

Read More Articles