ಸಿದ್ದು ವಿರುದ್ದ ವಾಗ್ದಾಳಿ ನಡೆಸಿದ‌ ಶೆಟ್ಟರ್

ಬೆಳಗಾವಿ :  ಲೋಕಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗೆ ಅನನುಭವ ಕಡಿಮೆ ಇದೆ ಎಂದು ಹೇಳಿಕೆ ನೀಡಿದ್ದ ಸಿದ್ದರಾಮಯ್ಯಗೆ ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ವಾಗ್ದಾಳಿ‌ ನಡೆಸಿದರು. ಭಾನುವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. , ಪ್ರತಿಪಕ್ಷದ ನಾಯಕ‌ ಮಾತನಾಡುವ ಭರದಲ್ಲಿ ಮಹಿಳೆಯರಿಗೆ ಅಪಮಾನ ಮಾಡುವ ರೀತಿ ಮಾತನಾಡಿದ್ದಾರೆ. ಅನನಭವಿ ಮಹಿಳೆ ಲೋಕಸಭೆಗೆ ಹೋಗಿ ಏನು ಮಾಡುತ್ತಾರೆ ಎಂದು ರಾಣಿ ಚನ್ನಮ್ಮನ ನಾಡಿನಲ್ಲಿ ಮಾತನಾಡಿದ್ದು, ಮಹಿಳೆಯರಿಗೆ ಅವಮಾನ ಮಾಡಿದ್ದಾರೆ.

promotions

ಸತೀಶ ಜಾರಕಿಹೊಳಿ ಅವರಿಗೆ ಏನು ಅನುಭವ ಇದೆ. ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ಧ್ವನಿ ಎತ್ತದವರು ಲೋಕಸಭೆಯಲ್ಲಿ ಪ್ರಶ್ನೆ ಮಾಡಬಲ್ಲರಾ ಎಂದು ಸಿದ್ದರಾಮಯ್ಯಗೆ ಚಾಟಿ ಬಿಸಿದರು.

promotions

ಬೆಳಗಾವಿಯಲ್ಲಿ ಕಾಂಗ್ರೆಸ್ ಕೊಡುಗೆ ಏನಿದೆ. ಬಿಜೆಪಿ ಅವಧಿಯಲ್ಲಿ ರೈಲು ಯೋಜನೆ, ವಿಮಾನ ನಿಲ್ದಾಣ ಸೇರಿದಂತೆ ಸಾಕಷ್ಟು ಅಭಿವೃದ್ಧಿ ಕಾರ್ಯವಾಗಿವೆ. ಯುಪಿಎ ಸರಕಾರದಲ್ಲಿ ಕಾಂಗ್ರೆಸ್ ನವರು ಸಾಕಷ್ಟು ಜನ ಇದ್ದರು. ಯಾಕೆ ಅಭಿವೃದ್ಧಿ ಮಾಡಲಿಲ್ಲ. ಸಿದ್ದರಾಮಯ್ಯನವರಿಗೆ ಮಹಿಳೆಯ ಬಗ್ಗೆ ಅಪಮಾನ ಮಾಡಿದ್ದಾರೆ. ಅವರು ಬಹಿರಂಗ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು.

ಶಾಸಕ ಅನಿಲ್ ಬೆನಕೆ, ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ. ಸಂದೀಪಕುಮಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Read More Articles