ಡಾ.ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ

 ಬೆಳಗಾವಿ: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 130 ನೇ‌ ಜನ್ಮದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.

promotions

ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಬುಧವಾರ(ಏ.14) ಆಯೋಜಿಸಲಾಗಿದ್ದ ಡಾ.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಿದರು.

promotions

ಉಪ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಪ್ರಸಕ್ತ ವರ್ಷ ಡಾ.ಅಂಬೇಡ್ಕರ್ ಜಯಂತಿಯನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ನಗರದ ಅಂಬೇಡ್ಕರ್ ಉದ್ಯಾನದಲ್ಲಿ ಇರುವ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಇದೇ ಸಂದರ್ಭದಲ್ಲಿ ‌ಶಾಸಕ‌‌ ಅನಿಲ್ ಬೆನಕೆ‌‌ ಅವರು ಕೂಡ ಮಾಲಾರ್ಪಣೆ ಮಾಡಿದರು. ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ.ಕೆ.ತ್ಯಾಗರಾಜನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದರ್ಶನ್ ಎಚ್.ವಿ., ಅಪರ ಜಿಲ್ಲಾಧಿಕಾರಿ ಯೋಗೇಶ್ವರ್, ಮಹಾನಗರ ಪಾಲಿಕೆಯ ಆಯುಕ್ತರಾದ ಜಗದೀಶ್, ದಲಿತ ಸಂಘಟನೆಗಳ ಮುಖಂಡರಾದ ಮಲ್ಲೇಶಿ ಚೌಗಲೆ ಮತ್ತಿತರರು ಉಪಸ್ಥಿತರಿದ್ದರು.

ಇದಕ್ಕೂ ಮುಂಚೆ ಸದಾಶಿವ ನಗರದಲ್ಲಿರುವ ಬೌದ್ಧವಿಹಾರದಲ್ಲಿ ಬುದ್ಧನ ಪ್ರತಿಮೆಗೆ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ಪುಷ್ಪ ಸಮರ್ಪಿಸಿದರು. ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ.ಕೆ.ತ್ಯಾಗರಾಜನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದರ್ಶನ್ ಎಚ್.ವಿ. ಮತ್ತಿತರರು ಉಪಸ್ಥಿತರಿದ್ದರು.

Read More Articles