ನಾಳೆ ದ್ವಿತೀಯ ಪಿಯು ಕೊನೆಯ ಆಂಗ್ಲಭಾಷಾ ಪರೀಕ್ಷೆ..!
- 15 Jan 2024 , 2:06 AM
- Bengaluru
- 124
ರಾಜ್ಯದ್ಯಂತ 1016 ಪರೀಕ್ಷಾ ಕೇಂದ್ರದಲ್ಲಿ ಬೆಳಿಗ್ಗೆ 10.15 ರಿಂದ 1.30 ರವರೆಗೆ ಪರೀಕ್ಷೆ ನಡೆಯಲಿದ್ದು ಸುಮಾರು 5.95 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಮುನ್ನ ಆರೋಗ್ಯ ತಪಾಸಣಾ ಕೇಂದ್ರದಲ್ಲಿ ತಪಾಸಣೆಗೆ ಒಳಪಟ್ಟು ನಂತರ ಪರೀಕ್ಷಾ ಕೇಂದ್ರ ಪ್ರವೇಶಿಸಬೇಕಿದೆ.
ವಿದ್ಯಾರ್ಥಿಗಳು ಸ್ವಂತ ಜಿಲ್ಲೆ ವ್ಯಾಪ್ತಿಯಲ್ಲಿ ಪರೀಕ್ಷೆಯನ್ನು ಬರೆಯಲಿದ್ದು ಪರೀಕ್ಷಾ ಕೇಂದ್ರಕ್ಕೆ ಹೋಗಿ ಬರಲು ಸಾರಿಗೆ ಇಲಾಖೆಯಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು.
ಈಗಾಗಲೇ ರಾಜ್ಯ ಸರ್ಕಾರ ಮಹಾಮಾರಿ ಕರೋನಾ ಮಧ್ಯೆಯೇ ಪರೀಕ್ಷೆ ನಡೆಸಲು ಎಲ್ಲ ರೀತಿಯ ಸಿದ್ಧತೆ ಮಾಡಿದ್ದು ವಿದ್ಯಾರ್ಥಿಗಳು ಉತ್ತಮ ಆರೋಗ್ಯಕರವಾಗಿ ಪರೀಕ್ಷೆಯನ್ನು ಬರೆಯಲಿ ಎನ್ನುವುದು ನಮ್ಮೆಲ್ಲರ ಆಶಯ











