ನಿಘಂಟು ತಜ್ಞ, ಪದ್ಮಶ್ರೀ ಪ್ರೊ. ಜಿ. ವೆಂಕಟಸುಬ್ಬಯ್ಯ ಇನ್ನಿಲ್ಲ

ಬೆಂಗಳೂರು: ಕನ್ನಡದ ನಿಘಂಟು ತಜ್ಞ, ಖ್ಯಾತ ಭಾಷಾ ತಜ್ಞ, ಶತಾಯುಷಿ ಪದ್ಮಶ್ರೀ ಪ್ರೊ.ಜಿ ವೆಂಕಟಸುಬ್ಬಯ್ಯ ಇನ್ನಿಲ್ಲ. ಅವರಿಗೆ 108 ವಯಸ್ಸುಗಳಾಗಿದ್ದು ಭಾನುವಾರ ತಡರಾತ್ರಿ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ.

promotions

ಸಾರಸ್ವತ ಲೋಕದಲ್ಲಿ ಜಿವಿ ಎಂದೇ ಖ್ಯಾತರಾಗಿರುವ ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯ, ಅವರು ನಾಡಿನ ಖ್ಯಾತ ವಿದ್ವಾಂಸರು ಹಾಗೂ ಜನಪ್ರಿಯ ಪ್ರಾಧ್ಯಾಪಕರಾಗಿ ಹೆಸರು ಗಳಿಸಿದ್ದರು. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಸುವರ್ಣ ಪದಕದೊಡನೆ ಎಂ.ಎ. ಪದವಿ, ನಂತರ ಬಿ.ಟಿ. ಪದವಿ ಗಳಿಸಿದ್ದರು.

promotions

ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕರಾಗಿ ವೃತ್ತಿಯನ್ನು ಆರಂಭಿಸಿ ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ, ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ನಿಘಂಟುವಿನ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅಖಿಲ ಕರ್ನಾಟಕ ವ್ಯಾಪ್ತಿಯನ್ನು ತಂದುಕೊಟ್ಟ ಹಿರಿಮೆ ಜಿವಿ ಅವರಿಗೆ ಸಲ್ಲುತ್ತದೆ.

Read More Articles