ಬೆಂಗಳೂರು: ರಾಜ್ಯದಲ್ಲಿ ಅವಧಿ ಮೀರಿರುವ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾಧಿಕಾರಿ ಮಟ್ಟದಲ್ಲಿ ಪ್ರತಿಯೊಂದು ಪಂಚಾಯತಿಗಳಿಗೂ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಬಹುತೇಕ ಗ್ರಾಮ ಪಂಚಾಯತಿಗಳ 5 ವರ್ಷಗಳ ಅವಧಿಯು ಜೂನ್ 2020 ರಿಂದ ಪ್ರಾರಂಭವಾಗಿ ವಿವಿಧ ದಿನಾಂಕಗಳಂದು ಪೂರ್ಣಗೊಳ್ಳುತ್ತದೆ . ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಗಳು ನಡೆಯದಿರುವ ಕಾರಣ , 5 ವರ್ಷದ ಅವಧಿಯನ್ನು ಮುಗಿಸಿದ ನಂತರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ , 1993 ರ ಪ್ರಕರಣ 8 ( 1 ) ( ಬಿ ) ( ii ) ರಡಿ ಕಲಂ 321 ನ್ನು ಜೊತೆಯಾಗಿ ಓದಿಕೊಂಡು ಆಡಳಿತಾಧಿಕಾರಿಗಳನ್ನು ನೇಮಿಸಲು ಜಿಲ್ಲಾಧಿಕಾರಿಗಳಿಗೆ ತಿಳಿಸಲು ಸರ್ಕಾರವು ನಿರ್ಧರಿಸಿರುತ್ತದೆ . ಅದರನ್ವಯ , ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ , 1993 ರ ಪ್ರಕರಣ 41 ಮತ್ತು 42 ರಂತೆ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸಲು ಕ್ರಮ ಕೈಗೊಳ್ಳುವಂತೆ ಈ ಮೂಲಕ ಸರ್ಕಾರದ ಪ್ರಧಾನ ಕಾರ್ಯದರ್ಶಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ .