ಬೆಂಗಳೂರು ರೌಂಡ್ ಹಾಕಿದ ಸಚಿವ ಬೊಮ್ಮಾಯಿ

ಬೆಂಗಳೂರು :ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿದರು. ವೀಕೆಂಡ್ ಕರ್ಫ್ಯೂಗಾಗಿ ಜಾರಿಗೊಳಿಸಲಾಗಿರುವ ಬಿಗಿ ಕ್ರಮಗಳನ್ನು ಪರಿಶೀಲಿಸಿದರು.

promotions

ಸದಾ ಜನಜಂಗುಳಿ ಇರುವ ಕೆಆರ್ ಮಾರುಕಟ್ಟೆ ಪ್ರದೇಶಕ್ಕೆ ಮೊದಲು ಭೇಟಿ ಮಾಡಿ ಅಲ್ಲಿನ ವ್ಯವಸ್ಥೆ ಗಮನಿಸಿದರು. ಇದೇ ಸಂದರ್ಭದಲ್ಲಿ ಮಹಿಳೆಯೊಬ್ಬರು ಮಾಸ್ಕ್ ಧರಿಸದೆ ಇರುವುದನ್ನು ಗಮನಿಸಿದ ಸಚಿವರು, ಆ ಮಹಿಳೆಗೆ ಮಾಸ್ಕ್ ನೀಡಿ ಅದನ್ನು ಹಾಕಿಕೊಳ್ಳುವಂತೆ ಸಲಹೆ ನೀಡಿದರು. ಮಾಸ್ಕ್ ಬಳಕೆ ಮಾಡಿ ಕೊರೊನಾದಿಂದ ದೂರ ಇರುವಂತೆ ಬಳಕೆ ಆ ಮಹಿಳೆಗೆ ಸಚಿವರು ಮನವರಿಕೆ ಮಾಡಿಕೊಟ್ಟರು.

promotions

ನಂತರ ಚಾಮರಾಜಪೇಟೆ, ಸೌತ್ ಎಂಡ್ ಸರ್ಕಲ್ ಮುಂತಾದ ಪ್ರದೇಶಗಳಿಗೆ ಸಚಿವ ಬೊಮ್ಮಾಯಿ ಅವರು ಭೇಟಿ ನೀಡಿ ಕರ್ಫ್ಯೂ ಬಗ್ಗೆ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಕಮಲಪಂತ್, ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More Articles