ಕೋವಿಡ್ ನಿಂದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಗುಣಮುಖ
- 15 Jan 2024 , 12:06 AM
- Belagavi
- 161
ಬೆಳಗಾವಿ: ಈಚೆಗೆ ಕೊರೊನಾ ಸೋಂಕು ದೃಢಪಟ್ಟು ಆಸ್ಪತ್ರೆ ಸೇರಿದ್ದ ಗ್ರಾಮೀಣ ಮತ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಸೋಮವಾರ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಕೋರೊನಾದಿಂದ ಚೇತರಿಸಿಕೊಳ್ಳಲು ಅವರ ಅಭಿಮಾನಿಗಳು, ಕಾರ್ಯಕರ್ತರು, ಕ್ಷೇತ್ರದ ಜನರು ದೇವರಲ್ಲಿ ಪ್ರಾರ್ಥನೆ ಮಾಡಿದ್ದರು ಈಗ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಬಿಡುಗಡೆ ಆಗುತ್ತಿರುವುದು ಕ್ಷೇತ್ರದ ಜನರಿಗೆ ಸಂತಸವನ್ನುಂಟು ಮಾಡಿದೆ.












