ರಾಜ್ಯದಲ್ಲಿ ಲಾಕ್‌ಡೌನ್ ಸುಳಿವು ನೀಡಿದ ಸಚಿವ ಎಂಟಿಬಿ

ಬೆಂಗಳೂರು :ಕೋವಿಡ್-19 ಎರಡನೇ ಅಲೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಆಸ್ಪತ್ರೆಯಲ್ಲಿ ಬೆಡ್ ಸಮಸ್ಯೆ ಉದ್ಬವವಾಗಿದೆ. ಜನರಿಗೆ ಆಗುವ ಸಮಸ್ಯೆಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಮುಂದೆ ಎಲ್ಲ ಸಚಿವರು ಹೇಳಿದ್ದೇವೆ ಕೆಲವೇ ಕ್ಷಣದಲ್ಲಿ ಸಿಎಂ ಸ್ಪಷ್ಟಪಡಿಸಲಿದ್ದಾರೆ ಎಂದು ಸಚಿವ ಎಂ.ಟಿ.ಬಿ ನಾಗರಾಜ ಹೇಳಿದರು.

promotions

ಸೋಮವಾರ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮವರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಕೊರೋನಾ ಮಹಾಮಾರಿ ಪರಿಸ್ಥಿತಿ ಹೇಗಿದೆ. ಗ್ರಾಮೀಣ ಪ್ರದೇಶದಲ್ಲಿ ಹೇಗೆ ಹರಡುತ್ತಿವೆ. ಸೂಕ್ತ ಚಿಕಿತ್ಸೆ ಇಲ್ಲದೆ ರೋಗಿಗಳು ಸಾವನ್ನುಪ್ಪತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಿಎಂಗೆ ಸಲಹೆ ನೀಡಿದ್ದೇವೆ. ಅದನ್ನು ಸಿಎಂ ಸ್ಪಷ್ಟಪಡಿಸಲಿದ್ದಾರೆ ಎಂದರು. ರಾಜ್ಯದಲ್ಲಿ ಬಡವರು ಸೂಕ್ತ ಚಿಕಿತ್ಸೆ ಇಲ್ಲದೆ ನರಳಾಡುತ್ತಿದ್ದಾರೆ. ಅದಕ್ಕೆ ಸೂಕ್ತ ಚಿಕಿತ್ಸೆ ನೀಡಲು ಸಲಹೆ ನೀಡಿದ್ದೇವೆ.

promotions

ಕಾರ್ಮಿಕರು, ಬಡವರು ಹಾಗೂ ಎಲ್ಲ ಸಮುದಾಯದ ಜನರಿಗೆ ತೊಂದರೆಯಾಗಡಂತೆ  ನೋಡಿಕೊಳ್ಳುವುದು ಸರಕಾರದ ಜವಾಬ್ದಾರಿ ಅದನ್ನು ಸಿಎಂ ಸ್ಪಷ್ಟಪಡಿಸಲಿದ್ದಾರೆ ಎಂದು ಹೇಳಿದರು.

Read More Articles