ಸೂಕ್ತ ಸಮಯದಲ್ಲಿ ಪರೀಕ್ಷೆ ನಡೆಸುವಂತೆ ಎಬಿವಿಪಿ ಒತ್ತಾಯ

ಬೆಳಗಾವಿ: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೋವಿಡ್ 19 ಹೆಚ್ಚುತ್ತಿರುವ ಕಾರಣದಿಂದ ಕರ್ನಾಟಕ ರಾಜ್ಯ ಸರ್ಕಾರವು ಈಗಾಗಲೇ ಶಾಲಾ ಕಾಲೇಜುಗಳನ್ನು ರಜೆ ನೀಡಿದೆ ಹಾಗೂ ಎಲ್ಲಾ ವಿಶ್ವ ವಿದ್ಯಾಲಯಗಳ ಪರೀಕ್ಷೆಗಳನ್ನು ವಿಶ್ವ ವಿದ್ಯಾಲಯಗಳು ಮುಂದುಡಲಾಗಿದೆ.

promotions

ಆದರೆ ರಾ.ಜೆ.ಪಿ ಯು ವಿದ್ಯಾರ್ಥಿಗಳ ಪರೀಕ್ಷೆಗಳನ್ನು ನಡೆಸಲು ಮುಂದಾಗಿದ್ದಿರಿ.ಆದರೆ ಕೆಲವೊಂದು ಸ್ಥಳಗಳಲ್ಲಿ ವಿದ್ಯಾರ್ಥಿಗಳು ಸರ್ಕಾರಿ ಹಾಸ್ಟೆಲ್‌ಗಳಲ್ಲಿ ವಾಸಿಸುತ್ತಿದ್ದು ಅಂತಹ ಹಾಸ್ಟೇಲ್‌ಗಳಿಗೆ ಪ್ರಸ್ತುತ ರಾಜ್ಯ ಸರ್ಕಾರದ ಕೋಡ್ - 19 ನಿಯಮದಂತೆ ಮುಂದಿನ ಆದೇಶದ ವರೆಗೆ ಹಾಸ್ಟೆಲ್‌ಗಳನ್ನು ಮುಚ್ಚಲಾಗಿದೆ ಇದರಿಂದ ವಿದ್ಯಾರ್ಥಿಗಳಿಗೆ ಉಳಿದುಕೊಳ್ಳಲು ಸಮಸ್ಯೆ ಉಂಟಾಗಿದೆ ಮತ್ತು ಉಪಚುನಾವಣೆ ಸಂದರ್ಭದಲ್ಲಿ ಕಾರ್ಯನಿರ್ವಾಹಿಸಿದ ಅನೇಕ ಅಧ್ಯಾಪಕರಿಗೆ ಕೋಡ್ ತಗುಲಿದೆ.

promotions

ಇಂತಾಹ ಸಂದರ್ಭದಲ್ಲಿ ಮನೆಬಿಟ್ಟು ಹೋರಿಗೆ ಬರಲು ಹೇದರುತ್ತಿರುವ ಸಂದರ್ಭದಲ್ಲಿ ಹಳ್ಳಿಗಳಿಂದ ನಗರಕ್ಕೆ ಬಂದು ಪರೀಕ್ಷೆಗಳನ್ನು ಬರೆಯಲು ವಿದ್ಯಾರ್ಥಿಗಳಿಗೆ ಸಾಧ್ಯವಾಗುವುದಿಲ್ಲ. ಇಂತಹ ಅನೇಕ ಸಮಸ್ಯೆಗಳ ನಡುವೆ ನೀವು ಪರೀಕ್ಷೆ ನಡೆಸುತ್ತಿರುವುದು ಸೂಕ್ತ ಸಮಯವಲ್ಲ ಆದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಗಳನ್ನು ಸೂಕ್ತ ಸಮಯದಲ್ಲಿ ನಡೆಸಬೇಕು ಎಂದು ಎಬಿವಿಪಿ ಆಗ್ರಹಿಸುತ್ತದೆ ಎಂದು ತಿಳಿಸಿದೆ.

ಹಾಗೂ ಪರೀಕ್ಷೆ ನಡೆಸಿದ್ದೆ ಆದಲ್ಲಿ ಮುಂದೆ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಉಂಟಾದಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳು ಮತ್ತು ಕುಲ ಸಚಿವರುಗಳೆ ನೇರ ಹೊಣೆ ಹೋರಬೇಕಾಗುತ್ತದೆ ಮತ್ತು ಇದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾದರೆ ಎಬಿವಿಪಿ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದೆ .

Read More Articles