18 ವರ್ಷ ಮೇಲ್ಪಟ್ಟ ವಿಕಲಚೇತನರಿಗೆ ಕೊವಿಡ್ ವ್ಯಾಕ್ಸಿನ್ ಪಡೆಯಲು ಆಪ್ ಮೂಲಕ ನೋಂದಣಿ

ಬೆಳಗಾವಿ : ಕೊವಿಡ್ -19 ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ವಿಕಲಚೇತನರು ಕೊವಿಡ್ ಗೆ ಸಂಬಂಧಿಸಿದ ವ್ಯಾಕ್ಸಿನ್ ಹಾಕಿಸಿಕೊಳ್ಳುವುದು ಅಗತ್ಯವಿದ್ದು, 18 ವರ್ಷ ಮೇಲ್ಪಟ್ಟ ಎಲ್ಲಾ ವಿಕಲಚೇತನರು Co - WIN App ಮೂಲಕ ತಮ್ಮ ಹೆಸರು ನೋಂದಾಯಿಸಿಕೊಂಡು, ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಅಥವಾ ಜಿಲ್ಲಾ ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಬೆಳಗಾವಿಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

promotions

ಹೆಚ್ಚಿನ ಮಾಹಿತಿಗಾಗಿ ತಾಲೂಕಿನಲ್ಲಿ ನೋಡಲ್ ಅಧಿಕಾರಿಗಳಾಗಿ ನೇಮಿಸಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯ ಸಹಾಯ ಯೋಜನಾಧಿಕಾರಿಗಳು, ಹಿರಿಯ ಮೇಲ್ವಿಚಾರಕಿಯರು ಅಥವಾ ತಮ್ಮ ತಾಲೂಕಿನ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು (ಎಂ.ಆರ್.ಡಬ್ಲ್ಯೂ) ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

promotions

Read More Articles