ಪ್ರಥಮ ಪಿಯು ರದ್ದು, ದ್ವಿತೀಯ ಪಿಯು ಪರೀಕ್ಷೆ ಮುಂದಡಿಕೆ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

 ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳ ಹಿನ್ನೆಲೆ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

promotions

ಇದೇ ತಿಂಗಳು ಮೇ 24 ರಿಂದ ಜೂನ್ 16 ವರೆಗೆ ನಡೆಯಬೇಕಿದ್ದ ದ್ವಿತೀಯ ಪಿಯು ಪರೀಕ್ಷೆ ಮುಂದಿನ ಆದೇಶದವರೆಗೆ ಮುಂದೂಡುವಂತೆ ರಾಜ್ಯ ಸರ್ಕಾರ ತೀರ್ಮಾನಿಸಲಾಗಿದೆ. ಇದೇ ವೇಳೆ ಮೊದಲ ವರ್ಷದ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದು ಮಾಡಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರವನ್ನೂ ತೆಗೆದುಕೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

promotions

ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಎಂದಿನಂತೆ ಮುಂದುವರೆಸಬೇಕು ಹಾಗೂ ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಎಂದು ಸಚಿವರು ಸ್ಪಷ್ಟ ಪಡಿಸಿದ್ದಾರೆ.

Read More Articles