ಕೋವಿಡ್ ರೋಗಿಗಳಿಗೆ ಶೀಘ್ರ ಆಕ್ಸಿಜನ್ ಪೂರೈಸಲು ಜಿಲ್ಲಾ ನೋಡಲ್ ಅಧಿಕಾರಿ ನೇಮಕ : ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್
- 14 Jan 2024 , 10:45 PM
- Belagavi
- 155
ಬೆಳಗಾವಿ ಕೋವಿಡ್ -19 ಸಾಂಕ್ರಾಮಿಕ ರೋಗವು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆಕ್ಸಿಜನ್ ಕೊರತೆ ಇರುವ ರೋಗಿಗಳಿಗೆ ಶೀಘ್ರವಾಗಿ ಆಕ್ಸಿಜನ್ ಪೂರೈಸಲು ಕೆ.ಎ.ಎಸ್ ಅಧಿಕಾರಿ ಹಾಗೂ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾಗಿರುವ ಈಶ್ವರ ಉಳ್ಳಾಗಡ್ಡಿ ಅವರನ್ನು ಜಿಲ್ಲಾ ನೋಡಲ್ ಅಧಿಕಾರಿಯಾಗಿ ನೇಮಿಸಿ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಸರ್ಕಾರಿ - ಖಾಸಗಿ ಆಸ್ಪತ್ರೆಗಳಿಗೆ ಪೂರ್ವ ಒಪ್ಪಂದದಂತೆ ಕೋವಿಡ್ -19 ರೋಗಿಗಳಿಗೆ ನೀಡಲು ಮೆಡಿಕಲ್ ಆಕ್ಸಿಜನ್ ನಿರಂತರವಾಗಿ ಸರಬರಾಜು ಮಾಡಲು ಹಾಗೂ ಮೆಡಿಕಲ್ ಆಕ್ಸಿಜನ್ ನಿರಂತರ ಉತ್ಪಾದನೆ, ವಿತರಣೆ, ಬಫರ ಸ್ಟಾಕ್ ನಿರ್ವಹಿಸಿದ ಬಗ್ಗೆ ಮಾಹಿತಿಯನ್ನು ಪಡೆದು ಸರ್ಕಾರಕ್ಕೆ ನೀಡಲು ಜಿಲ್ಲಾ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.











