ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿರುವ ಬಿಜೆಪಿ ಕಚೇರಿಯಲ್ಲಿ, ನೂತನ ರಾಜ್ಯಸಭಾ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾದ ಈರಣ್ಣ ಕಡಾಡಿಯವರಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆಯವರು ಹೂಗುಚ್ಛ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಪ್ರಣವ ಮಾನವಿ, ಎಪಿಎಂಸಿ ಸದಸ್ಯ ಬಂಡಾ ಘೋರಪಡೆ, ನಗರಸಭೆ ಸದಸ್ಯರಾದ ಜಯವಂತ ಬಾಟಲೆ, ರಾಜು ಗುಂದೇಶಾ, ಸಂತೋಷ ಸಾಂಗವಕಾರ,ಸೋನಾಲಿ ಕೊಟಡಿಯಾ, ಆಕಾಶ ಶೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.