ಕೋವಿಡ್ ಪ್ರಕರಣಗಳ ಹೆಚ್ಚಳ ಹಿನ್ನೆಲೆ: ಮೇ.24 ರವರೆಗೆ ನಿಷೇಧಾಜ್ಞೆ ವಿಸ್ತರಣೆ - ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ
- 30 Dec 2023 , 12:08 PM
- Belagavi
- 119
ಬೆಳಗಾವಿ:ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗೃತಾ ಕ್ರಮವಾಗಿ ಮೇ.24 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಕೋರೊನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಏಪ್ರಿಲ್ 26 ರ ರಾತ್ರಿ 9 ಗಂಟೆಯಿಂದ ಮೇ.12 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಹೊರಡಿಸಲಾಗಿತ್ತು.

ಆದರೆ, ಕೊವಿಡ್ ಪ್ರಕರಣಗಳಲ್ಲಿ ಪ್ರತಿದಿನ ಹೆಚ್ಚಳ ಕಂಡುಬರುತ್ತಿರುವುದರಿಂದ ಮೇ.12 ಬೆಳಿಗ್ಗೆ 6 ಗಂಟೆಯವರೆಗೆ ಇರುವ ನೀಷೆಧಾಜ್ಞೆಯನ್ನು ಮೇ.24 ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ.
ಅವಶ್ಯಕ ಚಟುವಟಿಕೆಗಳು ಹಾಗೂ ತಾಲೂಕಾ ಮಟ್ಟದ ವಿಪತ್ತು ನಿರ್ವಹಣಾ ಸಮಿತಿಯಿಂದ ಪೂರ್ವಾನುಮತಿ ಪಡೆದುಕೊಂಡ ಚಟುವಟಿಕೆಗಳಿಗೆ ಮಾತ್ರ ಅವಕಾಶವಿರುತ್ತದೆ.ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳಾದ ಎಂ.ಜಿ.ಹಿರೇಮಠ ಅವರು ಎಚ್ಚರಿಕೆ ನೀಡಿದ್ದಾರೆ.










