ಕೋವಿಡ್ -19 ಹಿನ್ನಲೆ, ಪಾಲನಾ ಸಂಸ್ಥೆಗಳಿಗೆ ದಾಖಲಾಗುವ ಮಕ್ಕಳಿಗೆ ಪ್ರತ್ಯೇಕ ವ್ಯವಸ್ಥೆ : ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಬೆಳಗಾವಿ :ಕೋವಿಡ್ -19 ತುರ್ತು ಪರಿಸ್ಥಿತಿಯಲ್ಲಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಹೊಸದಾಗಿ ದಾಖಲಾದ ಮಕ್ಕಳಿಗೆ ಸುರಕ್ಷತಾ ದೃಷ್ಟಿಯಿಂದ ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರಾಗಿರುವ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

promotions

ಮಕ್ಕಳ ಪಾಲನಾ ಸಂಸ್ಥೆಗಳಿಗೆ ಹೊಸದಾಗಿ ದಾಖಲಾಗುವ ಮಕ್ಕಳನ್ನು 2 ವಾರಗಳ ಕಾಲ ಕ್ವಾರಂಟೈನ್‌ನಲ್ಲಿಡಲು ಮತ್ತು ಕೋವಿಡ್-19 ರೋಗಕ್ಕೆ ತುತ್ತಾಗಿ ತಂದೆ-ತಾಯಿ / ತಾಯಿ ಅಥವಾ ತಂದೆ ಹಾಗೂ ಪಾಲಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳ ಪುನರ್ವಸತಿಗಾಗಿ ಸಕಲ ವ್ಯವಸ್ಥೆ ಮಾಡಲಾಗಿದೆ.

promotions

ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015 ರಡಿಯಲ್ಲಿ ರಕ್ಷಣೆ ಮಾಡಲಾದ ಮತ್ತು ಬಾಲಮಂದಿರಗಳಲ್ಲಿ ರಕ್ಷಣೆ ಪಡೆಯುತ್ತಿರುವ ಮಕ್ಕಳ ಅಭಿರಕ್ಷಣೆಯನ್ನೂ ಮಾಡಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರಾಗಿರುವ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಮಕ್ಕಳಪುನರ್ವಸತಿಗಾಗಿಅರ್ಹಸಂಸ್ಥೆಗಳಆಯ್ಕೆ: ಹೊಸದಾಗಿ ದಾಖಲಾದ ಮಕ್ಕಳನ್ನು ಕ್ವಾರಂಟೈನ್‌ನಲ್ಲಿ ಸುರಕ್ಷಿತವಾಗಿಡಲು ಅಗತ್ಯ ಮೂಲಭೂತ ಸೌಕರ್ಯಗಳನ್ನು ಹೊಂದಿರುವ ಮೂರು ಸಂಸ್ಥೆಗಳನ್ನು ಅರ್ಹ ಸಂಸ್ಥೆಗಳೆಂದು     ಗುರುತಿಸಿ, ಆಯ್ಕೆ ಮಾಡಲಾಗಿದೆ.

ಬಾಲಕರಿಗಾಗಿ ಶಿವಾಜಿ ನಗರದ 3ನೇ ಕ್ರಾಸ್ ನಲ್ಲಿರುವ ಸರಕಾರಿ ಬಾಲಕರ ಬಾಲ ಮಂದಿರ ಹಾಗೂ ಬಾಲಕಿಯರಿಗಾಗಿ ಮಹಾಂತೇಶ ನಗರದಲ್ಲಿರುವ ಶ್ರೀ ಶಿವಲಿಂಗೇಶ್ವರ ಶಿಕ್ಷಣ ಸಂಸ್ಥೆಯ “ಸೃಷ್ಠಿ” ಮಕ್ಕಳ ತೆರೆದ ತಂಗುದಾಣದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಅಲ್ಲದೇ, ಕೋವಿಡ್-19 ತುರ್ತು ಪರಿಸ್ಥಿತಿಯಲ್ಲಿ ರೋಗಕ್ಕೆ ತುತ್ತಾಗಿ ತಂದೆ-ತಾಯಿ/ ತಾಯಿ/ತಂದೆ ಹಾಗೂ ಪಾಲಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳ ಪುನರ್ವಸತಿಗಾಗಿ ಸುಭಾಷ ನಗರದಲ್ಲಿರುವ ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನವನ್ನು ಆಯ್ಕೆ ಮಾಡಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಆದೇಶ ಹೊರಡಿಸಿದ್ದಾರೆ.

ಮೂಲಭೂತ ಸೌಕರ್ಯ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ: ಗುರುತಿಸಿರುವ ಸಂಸ್ಥೆಗಳಲ್ಲಿ, ಸಂಸ್ಥೆಯವರು ಎಲ್ಲ ಮೂಲಭೂತ ಸೌಕರ್ಯಗಳನ್ನು ಹೊಸದಾಗಿ ದಾಖಲಾಗುವ ಮಕ್ಕಳು ಕ್ವಾರಂಟೈನ್ ಇದ್ದ ಸಮಯದಲ್ಲಿ ಒದಗಿಸಬೇಕು.

ಮೇಲುಸ್ತುವಾರಿ ವಹಿಸಿಕೊಂಡಿರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕದವರು ಎಲ್ಲ ರೀತಿಯ ಸಹಕಾರವನ್ನು ಒದಗಿಸಬೇಕು ಮತ್ತು ಮಕ್ಕಳ ಸಂಪೂರ್ಣ ಹಿತದೃಷ್ಟಿಯಿಂದ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರಾಗಿರುವ ಎಂ.ಜಿ.ಹಿರೇಮಠ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Read More Articles