ಕೊರೋನಾ ಸೋಂಕಿಗೆ ಬಲಿಯಾದ ಶಿಕ್ಷಕರ ಸಂಖ್ಯೆ ಎಷ್ಟು ಗೊತ್ತಾ ?

ಬೆಳಗಾವಿ: ಕೋವಿಡ್ ಸೋಂಕಿನ ಎರಡನೇ ಅಲೆಗೆ ಜಿಲ್ಲೆಯಲ್ಲಿ 20 ಜನ ಶಿಕ್ಷಕರು ಮೃತಪಟ್ಟಿದ್ದಾರೆ ಎಂದು ಡಿಡಿಪಿಐ ಡಾ.ಎ.ಬಿ.ಪುಂಡಲೀಕ ಹೇಳಿದರು.

promotions

ಸೋಮವಾರ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೊರೋನಾ ಸೋಂಕಿನ ಎರಡನೇ ಅಲೆಗೆ ಜಿಲ್ಲೆಯಲ್ಲಿ 20 ಜನ ಶಿಕ್ಷಕರು ಮೃತಪಟ್ಟಿದ್ದಾರೆ. ಈ ಪೈಕಿ 10 ಜನ ಶಿಕ್ಷಕರು ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಈ ಕುರಿತು ಈಗಾಗಲೇ ಸರಕಾರಕ್ಕೆ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ ಎಂದರು.

promotions

ಕೊರೋನಾ ಸೋಂಕಿನ ಅಲೆ ಭೀಕರವಾಗಿದ್ದು, ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಸುಮಾರು 53 ಜನರಿಗೆ ಸೋಂಕು ತಗುಲಿದೆ. ಶಿಕ್ಷರು ಕೊರೋನಾಗೆ ಭಯ ಪಡುವ ಅಗತ್ಯವಿಲ್ಲ. ಸಾಮಾಜಿಕ ಅಂತರ, ಮುಖಕ್ಕೆ ಮಾಸ್ಕ್, ಸ್ಯಾನಿಟೈಸರ್ ಮಾಡಿಕೊಂಡು‌ ಸರಕಾರದ ಮಾರ್ಗ ಸೂಚಿಯನ್ನು ಪಾಲನೆ ಮಾಡಬೇಕೆಂದು ವಿನಂತಿಸಿಕೊಂಡರು.

ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪರೀಕ್ಷೆ ಎದುರಿಸುವ ನಿಟ್ಟಿನಲ್ಲಿ ಶಿಕ್ಷಕರು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮೊಬೈಲ್ ನೆಟ್ವರ್ಕ್ ಸಮಸ್ಯೆ ಇದ್ದರೆ, ಶಿಕ್ಷಕರು ನೇರವಾಗಿ ಪೋಷಕರಿಗೆ ಕರೆ ಮಾಡಿ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸುವ ಕಾರ್ಯ ಮಾಡುತ್ತಿದ್ದಾರೆ ಎಂದರು.

Read More Articles