ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ..? ಇಂದು ಸಂಜೆ ಸಿಎಂ ಸಭೆ

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಬಗ್ಗೆ ಮುಂದುವರೆಸುವ ಕುರಿತು ಇಂದು ಸಂಜೆ ಮುಖ್ಯಮಂತ್ರಿ ಯಡಿಯೂರಪ್ಪನವರು ಸಭೆ ಕರೆದಿದ್ದಾರೆ, ಅದರಲ್ಲಿ ನಾವೆಲ್ಲರೂ ಕೋವಿಡ್ -19 ವಿಚಾರವಾಗಿ ಕೂಲಂಕಷವಾಗಿ ಚರ್ಚೆ ಮಾಡಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.

promotions

ಮೇ 24 ರ ನಂತರ ಲಾಕ್ ಡೌನ್ ವಿಸ್ತರಣೆಯ ಬಗ್ಗೆ ಕಂದಾಯ ಸಚಿವ ಆರ್ ಅಶೋಕ್ ಮತ್ತು ಆರೋಗ್ಯ ಸಚಿವ ಸುಧಾಕರ, ಗಣಿ ಖಾತೆ ಸಚಿವ ಮುರುಗೇಶ್ ನಿರಾಣಿ ಒಲವು ತೋರಿಸಿದ್ದಾರೆ. ಇಂದು ಸಂಜೆ ಮತ್ತೊಂದು ಸಭೆ ಸೇರಿ ಎಲ್ಲರೂ ಚರ್ಚಿಸಿದ ನಂತರ ಲಾಕ್ ಡೌನ್ ವಿಸ್ತರಣೆ ಮಾಡಬೇಕೋ ಬೇಡವೋ ಎನ್ನುವ ನಿರ್ಧಾರ ಕೈಗೊಳ್ಳಲಿದ್ದಾರೆ.

promotions

ಬಹುತೇಕ ಇಂದು ಘೋಷಣೆ ಮಾಡುವುದು ಸಂಶಯವಿದೆ. ಏಕೆಂದರೆ ನಾಳೆ ಪ್ರಧಾನಿ 17 ಜಿಲ್ಲೆಗಳ ಜಿಲ್ಲಾಧಿಕಾರಗಳ ಜೊತೆ ಸಂವಾದ ನಡೆಸಲಿದ್ದು ಅದರ ಬಳಿಕವಷ್ಟೇ ರಾಜ್ಯಸರ್ಕಾರ ಘೋಷಣೆ ಮಾಡುವ ಸಾಧ್ಯತೆಯಿದೆ.

ಇಂದು ಸಂಜೆ ಸಭೆಯಲ್ಲಿ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳ ಜೊತೆ ವಿಡಿಯೊ ಕಾನ್ಸರೆನ್ಸ್ ಮೂಲಕ ಚರ್ಚೆ ನಡೆಸಿ ನಾಳೆ ಪ್ರಧಾನಿಯೊಂದಿಗೆ ಯಾವೆಲ್ಲಾ ವಿಷಯಗಳನ್ನು ಮಾತನಾಡಬೇಕು, ಯಾವ ವಿಷಯಗಳನ್ನು ಪ್ರಧಾನಿ ಮುಂದಿಡಬೇಕು ಎಂದು ಚರ್ಚೆಯ ನಂತರ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

Read More Articles