ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ನಿಧನಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಂತಾಪ
- 14 Jan 2024 , 10:44 PM
- Bengaluru
- 102
ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಶತಾಯುಷಿ ಎಚ್ ಎಸ್ ದೊರೆಸ್ವಾಮಿ ಅವರ ನಿಧನಕ್ಕೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕನ್ನಡ ನಾಡಿಗೆ ಎಚ್ಎಸ್ ದೊರೆಸ್ವಾಮಿ ಹಿರಿಯಣ್ಣನಂತೆ ಇದ್ದರು. ಅವರು ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ಪ್ರಮುಖರು. ತಮ್ಮ ಇಳಿವಯಸ್ಸಿನಲ್ಲಿಯೂ ತಮ್ಮ ಇಡೀ ಜೀವನವನ್ನು ಸಮಾಜಸೇವೆಗೆ ಅವರು ಮುಡಿಪಾಗಿಟ್ಟಿದ್ದರು. ಅವರ ನಿಧನದಿಂದ ಕನ್ನಡ ನಾಡು ಬಡವಾಗಿದೆ ಎಂದು ಅವರು ಕಂಬನಿ ಮಿಡಿದಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.










