ಜಿಲ್ಲಾಡಳಿತಕ್ಕೆ ಆಕ್ಸಿಜನ್ ಸಿಲಿಂಡರ್ ನೀಡಿದ ಶಾಸಕ ಬೆನಕೆ

ಬೆಳಗಾವಿ : ಕೊರೋನಾ ಸೋಂಕಿತರಿಗೆ ಆಕ್ಸಿಜನ್ ಸಮಸ್ಯೆಯಾಗಬಾರದು ಎಂದು ಬಿಮ್ಸಗೆ 30 ಆಕ್ಸಿಜನ್ ಸಿಲಿಂಡರ್ ಮತ್ತು ಕಾನ್ಸಂಟ್ರೆಂಟರ್ ಮಶೀನ ಜಿಲ್ಲಾಡಳಿತಕ್ಕೆ ನೀಡಲಾಗಿದೆ ಎಂದು ಶಾಸಕ ಅನಿಲ ಬೆನಕೆ ಹೇಳಿದರು.

promotions

ಅವರು ಗುರುವಾರದಂದು ಚನ್ನಮ್ಮ ವೃತ್ತದ ಬಳಿ ಪತ್ರಕರ್ತರೊಂದಿಗೆ ಮಾತನಾಡಿದರು ‌ ಕೊರೋನಾ ಸಂಕಷ್ಟ ಜಿಲ್ಲೆಗೆ ವ್ಯಾಪಕವಾಗಿದೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಜನರಿಗೆ ತೊಂದರೆಯಾಗಬಾರದು ಎಂದು ಆಕ್ಸಿಜನ್ ಸಿಲಿಂಡರ್ ನೀಡಲಾಗಿದೆ ಎಂದು ಹೇಳಿದರು.

promotions

ಡಿಸಿ ಹಿರೇಮಠ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣದಲ್ಲಿ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಜನರು ಆತಂಕ ಪಡುವ ಅಗತ್ಯ ಇಲ್ಲ. ಖಾಸಗಿ ಆಸ್ಪತ್ರೆಯಲ್ಲಿಯೂ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಡಿಸಿಪಿ ವಿಕ್ರಂ ಅಮಟೆ, ಪಾಲಿಕೆ ಆಯುಕ್ತ ಜಗದೀಶ ಹಾಜರಿದ್ದರು.

Read More Articles