ಕೊರೊನಾ ಭೀತಿ ಮಧ್ಯೆಯೂ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯಲು ಸಜ್ಜಾದ ವಿದ್ಯಾರ್ಥಿಗಳು
- 15 Jan 2024 , 3:16 AM
- Bengaluru
- 113
ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಬರೆಯಲು ರಾಜ್ಯಾದ್ಯಂತ 8,48,203 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಿದ್ದರಾಗಿದ್ದರೆ . ಬೆಂಗಳೂರಿನಲ್ಲಿ 1,13,800 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ ಎಂದು ಹೇಳಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ , ರಾಜ್ಯಾದ್ಯಂತ 10 ಮಕ್ಕಳಿಗೆ ಕೊರೋನಾ ಪಾಸಿಟಿವ್ ಬಂದು ಕ್ವಾರಂಟೈನ್ನಲ್ಲಿದ್ದಾರೆ . ಇವರಿಗೆ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ . ಆದರೆ ಆಗಸ್ಟ್ ತಿಂಗಳಲ್ಲಿ ಇವರಿಗೆ ಪ್ರತ್ಯೇಕವಾಗಿ ಪರೀಕ್ಷೆ ನಡೆಸಲಾಗುವುದು ಎಂದರು . ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ಇರುತ್ತದೆ . ಇರುತ್ತದೆ . ಕಂಟೈನ್ಸೆಂಟ್ ಜೋನ್ನಲ್ಲಿದ್ದ 26 ಪರೀಕ್ಷಾ ಕೇಂದ್ರಗಳನ್ನ ಸ್ಥಳಾಂತರ ಮಾಡಲಾಗಿದೆ.
5757 ಪರೀಕ್ಷಾ ಕೇಂದ್ರಗಳನ್ನೂ ಸ್ಯಾನಿಟೈಸ್ ಮಾಡಲಾಗಿದೆ ಮಕ್ಕಳ ಆರೋಗ್ಯ ದೃಷ್ಟಿಯಿಂದ ಆರೋಗ್ಯ ತಪಾಸಣಾ ಕೇಂದ್ರಗಳನ್ನ ಸ್ಥಾಪಿಸಲಾಗಿದೆ. ಎಲ್ಲರಿಗೂ ಮಾಸ್ಕ್ ಕಡ್ಡಾಯ ಇರುತ್ತದೆ . ಜ್ವರ , ಕೆಮ್ಮು , ನೆಗಡಿ ಇರುವವರಿಗೆ ಎನ್ 95 ಮಾಸ್ಕ್ ನೀಡಲಾಗುವುದು ಎಂದು ಶಿಕ್ಷಣ ಸಚಿವರು ವಿವರ ನೀಡಿದರು . ಸಾರಿಗೆ ಸಂಪರ್ಕ ಇಲ್ಲದ ಭಾಗದಿಂದ ಬರುವ ವಿದ್ಯಾರ್ಥಿಗಳಿಗೆ ಖಾಸಗಿ ವಾಹನದ ವ್ಯವಸ್ಥೆ ಮಾಡಲಾಗಿದೆ . ಗಡಿಭಾಗದಿಂದ ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ . ಪರೀಕ್ಷಾ ಕೇಂದ್ರಗಳ ಸುತ್ತಲೂ ಝರಾಕ್ಸ್ , ಸೈಬರ್ ಸೆಂಟರ್ಗಳಿದ್ದರೆ ಅವನ್ನ ಮುಚ್ಚಲು ಆದೇಶಿಸಲಾಗಿದೆ ತಿಳಿಸಿದರು ಇಂದು ನೆಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆ ಸರ್ಕಾರ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳಲಾಗಿದೆ.











