ಆಸ್ತಿ ತೆರಿಗೆ ಪಾವತಿಯ ರಿಯಾಯಿತಿ ಕಾಲಾವಧಿ ವಿಸ್ತರಣೆ

ಬೆಳಗಾವಿ 2021-22ನೇ ಸಾಲಿನ ಆರ್ಥಿಕ ವರ್ಷದ ಆಸ್ತಿ ತೆರಿಗೆ ಪಾವತಿಗೆ ನೀಡಲಾಗಿರುತ್ತಿರುವ ರಿಯಾಯಿತಿಯ ಕಾಲಾವಧಿಯನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್. ತಿಳಿಸಿದ್ದಾರೆ.

promotions

2021-22ನೇ ಸಾಲಿನ ಆರ್ಥಿಕ ವರ್ಷದ ಆಸ್ತಿ ತೆರಿಗೆಯನ್ನು ಏಪ್ರಿಲ್ ತಿಂಗಳಿನಲ್ಲಿ ಪಾವತಿಸಬೇಕಾಗಿದ್ದು, ನಗರ ಸ್ಥಳೀಯ ಸಂಸ್ಥೆಗಳು ಶೇ.5 ರಷ್ಟು ರಿಯಾಯಿತಿಯನ್ನು ನೀಡುತ್ತವೆ.

promotions

ಸರ್ಕಾರದ ಆದೇಶದಂತೆ, ಸಾರ್ವಜನಿಕರಿಗೆ ಅನುಕೂಲವಾಗಲು ರಿಯಾಯಿತಿಯ ಕಾಲಾವಧಿಯನ್ನು ವಿಸ್ತರಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್. ತಿಳಿಸಿದ್ದಾರೆ.

ಸಂಬಂಧಪಟ್ಟ ವಲಯ ಕಚೇರಿಗಳಲ್ಲಿ ಆಸ್ತಿ ತೆರಿಗೆ ಪಾವತಿ: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನಲೆ ತಾತ್ಕಾಲಿಕವಾಗಿ ಆಸ್ತಿಕರ ಭರಿಸಿಕೊಳ್ಳುತ್ತಿರುವ ಬೆಳಗಾವಿ-1 ಕೇಂದ್ರಗಳನ್ನು ಬಂದ್ ಮಾಡಲಾಗಿದ್ದು, ಸಾರ್ವಜನಿಕರು ಸಂಬಂಧಪಟ್ಟ ವಲಯ ಕಚೇರಿಗಳಲ್ಲಿ ತಮ್ಮ ಮೊಬೈಲ್ ಮತ್ತು ಎ.ಟಿ.ಎಂ.ಕಾರ್ಡ ತೆಗೆದುಕೊಂಡು ಹೋಗಿ ಆಸ್ತಿ ತೆರಿಗೆಯನ್ನು ಪಾವತಿಸಬಹುದಾಗಿದೆ.

ಆದ್ದರಿಂದ, ತೆರಿಗೆ ಪಾವತಿದಾರರು ರಿಯಾಯಿತಿ ಕಾಲಾವಧಿ ವಿಸ್ತರಣೆಯ ಸದಾವಕಾಶವನ್ನು ಉಪಯೋಗಿಸಿಕೊಂಡು ಆಸ್ತಿ ತೆರಿಗೆ ಪಾವತಿಸಬೇಕೆಂದು ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More Articles