ಹೈಕಮಾಂಡ್ ಸೂಚಿಸಿದರೇ ರಾಜೀನಾಮೆ ಕೊಡಲು ಸಿದ್ದ: ಸಿಎಂ ಯಡಿಯೂರಪ್ಪ
- 14 Jan 2024 , 11:00 PM
- Bengaluru
- 111
ಬೆಂಗಳೂರು : ನಾಯಕತ್ವ ಬದಲಾವಣೆ ವಿಚಾರ, ಬಿಜೆಪಿಯಲ್ಲಿನ ಅಸಮಾಧಾನದ ಬೆನ್ನಲ್ಲೇ ತಮ್ಮದೆ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ಭಾನುವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಿಎಂ ಯಡಿಯೂರಪ್ಪ, ಬಿಜೆಪಿ ಹೈಕಮಾಂಡ್ ನನ್ನ ಮೇಲೆ ಸಂಪೂರ್ಣ ವಿಶ್ವಾಸವಿಟ್ಟಿದೆ. ಎಲ್ಲಿಯವರೆಗೆ ಅಧಿಕಾರದಲ್ಲಿರಲು ಹೇಳುತ್ತಾರೋ ಅಲ್ಲಿಯವರೆಗೂ ನಾನು ಅಧಿಕಾರದಲ್ಲಿ ಮುಂದುವರೆಯು ತ್ತೇನೆ. ಹೈಕಮಾಂಡ್ ರಾಜೀನಾಮೆ ನೀಡುವಂತೆ ನನಗೆ ಸೂಚಿಸಿದರೆ ಹಿಂದೆ ಮುಂದೆ ನೋಡಲ್ಲ, ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ತೆರೆ ಮರೆಯಲ್ಲಿ ಕೆಲ ಸಚಿವರು-ಶಾಸಕರು ನಡೆಸುತ್ತಿದ್ದ ಯತ್ನಕ್ಕೆ ಹಾಗೂ ನಾಯಕರ ಅನಗತ್ಯ ಹೇಳಿಕೆಗಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ರಾಜೀನಾಮೆ ನೀಡಿ ಜನತೆ ಪರ ಕೆಲಸ ಮಾಡುತ್ತೇನೆ, ನನ್ನ ಬದಲಿಗೆ ಪರ್ಯಾಯ ನಾಯಕತ್ವ ಇಲ್ಲ ಎಂಬ ಮಾತನ್ನು ನಾನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.











