ಬೆಂಗಳೂರು ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲಾ, ಸಿಎಂ ಬಿ.ಎಸ್.ವೈ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಮತ್ತೆ ಲಾಕ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದ ಆರ್ಥಿಕ ಸುಧಾರಣೆ ಮುಖ್ಯವಾಗಿದೆ. ಕೊವಿಡ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ವ ಪಕ್ಷ ಶಾಸಕರ ಸಭೆ ಕರೆದಿದ್ದೇನೆ. ಅವರವರ ವಿಧಾನಸಭಾ ಕ್ಷೇತ್ರಗಳಲ್ಲಿ ಕ್ರಮ ಕೈಗೊಳ್ಳಬೇಕು.ಸರ್ವ ಪಕ್ಷ ಸಭೆ ಕರೆದು ಅವರ ಸಲಹೆಯನ್ನು ಗಂಭೀರವಾಗಿ ಪರಿಗಣಿಸುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

. ಗುರುವಾರ ಒಂದೇ ದಿನ ನಗರದಲ್ಲಿ 113 ಪ್ರಕರಣಗಳು ಪತ್ತೆಯಾಗಿವೆ. ಪರಿಣಾಮ ಸೋಂಕಿತರ ಸಂಖ್ಯೆ 1791 ಕ್ಕೆ ತಲುಪಿದೆ. ಈ ಪೈಕಿ 1207 ಪ್ರಕರಣಗಳು ಸಕ್ರಿಯವಾಗಿದೆ. ಮುಂದಿನ ದಿನಗಳಲ್ಲಿ ಸೋಂಕು ಮತ್ತಷ್ಟು ತೀವ್ರ ಸ್ವರೂಪದಲ್ಲಿ ಹರಡುವ ಸಾಧ್ಯತೆ ಇರುವುದರಿಂದ ಆತಂಕ ಮೂಡಿಸಿದೆ.ಸದ್ಯದ ಪರಿಸ್ಥಿತಿಯಲ್ಲಿ ಕೆಲವು ದಿನಗಳ ಕಾಲ ಕಾದು ನೋಡುವುದು ಒಳಿತು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಆರ್ಥಿಕ ದೃಷ್ಟಿಯಲ್ಲಿ ಮತ್ತೆ ಲಾಕ್‌ಡೌನ್ ಜಾರಿಗೊಂಡರೆ ಸಮಸ್ಯೆ ಅಧಿಕವಾಗುತ್ತದೆ. ಪರ್ಯಾಯ ವ್ಯವಸ್ಥೆ ಕೈಗೊಂಡ ನಂತರ ಶಾಸಕ ಹಾಗೂ ಸಚಿವರ ಜೋತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೆವೆ.

promotions

Read More Articles