ಯಡಿಯೂರಪ್ಪ ನಾಯಕತ್ವದಲ್ಲಿ ಮುಂದುವರಿಯುತ್ತೇವೆ; ಸಚಿವ ಆರ್.ಅಶೋಕ
- 15 Jan 2024 , 3:13 AM
- Bengaluru
- 104
ಬೆಂಗಳೂರು: ನಮ್ಮದು ಪ್ರಜಾಪ್ರಭುತ್ವವಿರುವ ಪಕ್ಷ, ಅನಗತ್ಯ ಹೇಳಿಕೆ ನೀಡುವವರ ವಿರುದ್ಧ ಪಕ್ಷ ಸೂಕ್ತ ಕ್ರಮ ಕೈಗೊಳ್ಳುತ್ತದೆ. ಯಡಿಯೂರಪ್ಪ ಸಮರ್ಥ, ಗಟ್ಟಿ ನಾಯಕ ಎಂದು ಸಚಿವ ಆರ್.ಅಶೋಕ ಹೇಳಿಕೆ ನೀಡಿದ್ದಾರೆ.

ಬೆಂಗಳೂರಲ್ಲಿ ಮಾತನಾಡಿದ ಅವರು ಯಡಿಯೂರಪ್ಪ ಜತೆ 40 ವರ್ಷ ಕೆಲಸ ಮಾಡಿದ್ದೇನೆ. ಅವರ ನಾಯಕತ್ವದಲ್ಲಿ ಮುಂದುವರಿಯುತ್ತೇವೆ. ಪಕ್ಷದ ವರ್ಚಸ್ಸು ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯಪ್ರವೃತ್ತರಾಗಬೇಕಿದೆ. ಯಡಿಯೂರಪ್ಪ ಆಲದ ಮರದಂತೆ ಎಂದು ಹೇಳಿದ್ದಾರೆ.











